Breaking News

ಖಾಸಗಿ ಆಸ್ಪತ್ರೆಗಳು ಮುಷ್ಕರ ಆಸ್ಪತ್ರೆಯ ಓಪಿಡಿಗಳು ಬಂದ್

Spread the love

ಬೆಂಗಳೂರು : ಆಯುರ್ವೇದ ವೈದ್ಯರಿಗೆ ಸರ್ಜರಿ ಮಾಡಲು ಅವಕಾಶ  ನೀಡಿರುವುದನ್ನು ವಿರೋಧಿಸಿ  ಖಾಸಗಿ ಆಸ್ಪತ್ರೆಗಳು ಮುಷ್ಕರಕ್ಕೆ ಕರೆ ಕೊಟ್ಟಿವೆ. ಹೀಗಾಗಿ ಖಾಸಗಿ ಆಸ್ಪತ್ರೆಯ ಓಪಿಡಿಗಳು ಬಂದ್ ಇರಲಿವೆ.

ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಓಪಿಡಿ ಸೇವೆ ಸ್ಥಗಿತಗೊಳ್ಳಲಿವೆ. ಆದರೆ ಎಮರ್ಜನ್ಸಿ ಸೇವೆ ಎಂದಿನಂತೆ ಇರಲಿದೆ. ಐಎಂಎ ನೀಡಿರುವ ಬಂದ್ ಕರೆಗೆ PHANA ಸೇರಿ ಹಲವು ಸಂಘಟನೆಗಳು ಸಾಥ್ ನೀಡಿವೆ.

ಕೇಂದ್ರ ಸರ್ಕಾರ ಆಯುರ್ವೇದ ಶಿಕ್ಷಣ ತಿದ್ದುಪಡಿ ನಿಯಮಾವಳಿ ಅಧಿಸೂಚನೆಯನ್ನ ಹಿಂಪಡೆಯುವಂತೆ ಒತ್ತಾಯಿಸಿ  ಭಾರತೀಯ ವೈದ್ಯಕೀಯ ಸಂಘ ಪ್ರತಿಭಟನೆಗೆ ಕರೆ ನೀಡಿದೆ.

ಕೇಂದ್ರ ಸರ್ಕಾರದ ನೋಟಿಫಿಕೇಶನ್​​ಲ್ಲಿ ಈ ವರ್ಷದ ಪಿಜಿ ಕೋರ್ಸ್​ಗಳಲ್ಲಿ 39 ಜನರಲ್ ಸರ್ಜರಿ ಮತ್ತು 19 ಸ್ಪೆಷಲ್ ಸರ್ಜರಿ ತರಬೇತಿಗೆ ಅವಕಾಶ ಮಾಡಿಕೊಟ್ಟಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ