ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬೀಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಿಜೆಪಿ ಎಂಎಲ್‍ಸಿ ಸಿ ಪಿ ಯೋಗೇಶ್ವರ್ ಅವರು ಹೆಚ್‍ಡಿಕೆ ಹಾಗೂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗ್ರಾ.ಪಂ ಚುನಾವಣೆ ಹಿನ್ನೆಲೆ ಚನ್ನಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತಾಡಿದ ಅವರು, ಕುಮಾರಸ್ವಾಮಿ ಸರ್ಕಾರವನ್ನ ಸ್ಕೆಚ್ ಹಾಕಿ ತೆಗೆದಿದ್ದು ನಾನೇ. ನನ್ನನ್ನ ಡಿಕೆಶಿ-ಹೆಚ್‍ಡಿಕೆ ಸೇರಿ ಸೋಲಿಸಿದ್ದರು. ಅದಕ್ಕಾಗಿ ನಾನು ಬೆಂಗಳೂರಿನಲ್ಲಿ ಸ್ಕೆಚ್ ಹಾಕಿ ಸರ್ಕಾರ ತೆಗೆದೆ ಎಂದಿದ್ದಾರೆ.
Laxmi News 24×7