Breaking News

ಜೈಲಿನಲ್ಲಿ  ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಯನ್ನು, ಪತ್ನಿ, ಪುತ್ರ, ಪುತ್ರಿಯರು ಭೇಟೆ

Spread the love

ಬೆಳಗಾವಿ : ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ  ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಯನ್ನು, ಪತ್ನಿ, ಪುತ್ರ, ಪುತ್ರಿಯರು ಇಂದು ಭೇಟೆಯಾದರು.

ಧಾರವಾಡ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿನಯ್ ಕುಲಕರ್ಣಿಯನ್ನು ಭೇಟಿ ಮಾಡಲು ಕುಟುಂಬಸ್ಥರಿಗೆ ಅವಕಾಶ ನೀಡುವಂತೆ ಮಧ್ಯಾಹ್ನ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿಗೆ ಆಗಮಿಸಿದ ಕುಟುಂಬಸ್ಥರಿಗೆ ಸಂಜೆ  4 ರಿಂದ 5 ಗಂಟೆಯವರೆಗೆ ಭೇಟಿಗೆ ಅವಕಾಶ ನೀಡಿದೆ.

ವಿನಯ ಕುಲಕರ್ಣಿಯನ್ನು ಪತ್ನಿ ಶಿವಲೀಲಾ ಕುಲಕರ್ಣಿ, ಪುತ್ರಿಯರಾದ ವೈಶಾಲಿ, ದೀಪಾಲಿ, ಪುತ್ರ ಹೇಮಂತ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ