Breaking News

ಮೇಲಾಧಿಕಾರಿಯ ಕಿರುಕುಳ, ಮಾನಸಿಕ ಹಿಂಸೆಗೆ ಬೇಸತ್ತು, ಪುರಸಭೆ ಆರೋಗ್ಯಾಧಿಕಾರಿಯಾದ ಡಾ.ರವಿಕೃಷ್ಣ ಪಣಚ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿ

Spread the love

ಮಂಗಳೂರು: ಮೇಲಾಧಿಕಾರಿಯ ಕಿರುಕುಳ, ಮಾನಸಿಕ ಹಿಂಸೆಗೆ ಬೇಸತ್ತು, ಪುರಸಭೆ ಆರೋಗ್ಯಾಧಿಕಾರಿಯಾದ ಡಾ.ರವಿಕೃಷ್ಣ ಪಣಚ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ.

ಮೇಲಾಧಿಕಾರಿ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರ ಬರೆದಿಟ್ಟು ವಿಷಸೇವಿಸಿ ಡಾ.ರವಿಕೃಷ್ಣ ಪಣಚ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರ ಸ್ಥಿತಿಗೆ ತಲುಪಿದ್ದ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ರವಿಕೃಷ್ಣ, ಪತ್ರದಲ್ಲಿ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಪ್ರತಿದಿನ ಮಾನಸಿಕ ಕಿರುಕುಳ ನೀಡುತ್ತಿದ್ದು, ಕಚೇರಿ ಸಿಬ್ಬಂದಿ ಇಕ್ಬಾಲ್ ಕೂಡ ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾನೆ. ಇದರಿಂದ ಪ್ರತಿದಿನ ಬೈಗುಳ, ಕಿರುಕುಳ, ಅವಮಾನ ಮಾಡಲಾಗುತ್ತಿದೆ. ಹೀಗಾಗಿ ಮುಖ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬರೆದಿಟ್ಟು ವಿಷ ಸೇವಿಸಿದ್ದರು ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ