ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ನಟಿ ಸಂಜನಾ ಗಲ್ರಾಣಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಸಂಜನಾ ಅವರು ಗಂಭೀರವಾದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಅವರಿಗೆ ಶಸ್ತ್ರಚಿಕಿತ್ಸೆ ನೀಡುವ ಅಗತ್ಯವಿದೆ. ಹೀಗಾಗಿ ಜಾಮೀನು ಮಂಜೂರು ಮಾಡುವಂತೆ ಸಂಜನಾ ಪರ ವಕೀಲರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ಅಂಗೀಕರಿಸಿದ ನ್ಯಾಯಾಲಯ ಸಂಜನಾ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 3 ಲಕ್ಷ ರೂ ವೈಯಕ್ತಿಕ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ನೀಡುವಂತೆ ನ್ಯಾಯಾಲಯ ಸೂಚಿಸಿದೆ.
Laxmi News 24×7