Breaking News

ಲಕ್ಷ್ಮಣ್ ಸವದಿ ಬೊಮ್ಮಾಯಿಜತೆ ಸಿಎಂ ಬಿಎಸ್‍ವೈ ಸಭೆ..

Spread the love

ಬೆಂಗಳೂರು,ಡಿ.12- ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಕಾನೂನು ಸುವ್ಯವಸ್ಥೆ ಕುರಿತಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಇಂದು ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಬೊಮ್ಮಾಯಿ ಅವರು, ಸುಮಾರು 30ಕ್ಕೂ ಹೆಚ್ಚು ನಿಮಿಷಗಳ ಕಾಲ ಮಾತುಕತೆ ನಡೆಸಿ ಪರಿಸ್ಥಿತಿಯ ಬಗ್ಗೆ ವಿವರಣೆ ನೀಡಿದರು.

ಪ್ರತಿಭಟನೆ ನೆಪದಲ್ಲಿ ಕೆಲವು ಸಮಾಜಘಾತುಕ ಶಕ್ತಿಗಳು ಅಹಿತಕರ ಘಟನೆ ನಡೆಸುವ ಸಾಧ್ಯತೆಯಿದೆ ಎಂಬ ಗುಪ್ತಚರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ತಕ್ಷಣವೇ ಸಿಎಂ ನಿವಾಸಕ್ಕೆ ಆಗಮಿಸಿ ಕೈಗೊಂಡಿರುವ ಕ್ರಮಗಳ ಕುರಿತಂತೆ ಮಾಹಿತಿ ನೀಡಿದರು. ಮುಷ್ಕರದ ನೆಪದಲ್ಲಿ ಕೆಲವು ವಿಛಿದ್ರಕಾರಕ ಶಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹವಣಿಸುತ್ತವೆ. ಇಂಥವರ ಚಲನವಲನಗಳ ಬಗ್ಗೆ ಹದ್ದಿನ ಕಣ್ಣಿಡಲು ಪೊಲೀಸರಿಗೆ ಸೂಚನೆ ಕೊಟ್ಟಿರುವುದಾಗಿ ಬೊಮ್ಮಾಯಿ ತಿಳಿಸಿದ್ದಾರೆ ಎಂದು ಗೊತ್ತಾಗಿದೆ.

ಸಿಬ್ಬಂದಿ ಹೊರತುಪಡಿಸಿ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಪ್ರತಿಭಟನಾ ಸ್ಥಳದಲ್ಲಿ ತಿರುಗಾಡುತ್ತಿದ್ದರೆ ಕೂಡಲೇ ಅಂಥವರನ್ನು ವಶಕ್ಕೆ ಪಡೆಯಬೇಕು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೆ ಯಾರ ಮೇಲೂ ಕ್ರಮ ಜರುಗಿಸಬಾರದು. ವಾಹನಗಳ ಮೇಲೆ ಕಲ್ಲು ಎಸೆತ ಇಲ್ಲವೇ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಬಂಧಿಸುವಂತೆಯೂ ಸೂಚಿಸಿರುವುದಾಗಿ ಸಿಎಂಗೆ ವಿವರ ನೀಡಿದ್ದಾರೆ.

ಈಗಾಗಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕರು, ವಲಯ ಐಜಿಗಳು, ಗುಪ್ತಚರ ವಿಭಾಗ ಮುಖ್ಯಸ್ಥರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಆಂತರಿಕ ಭದ್ರತಾ ವಿಭಾಗ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ನಿರಂತರವಾಗಿ ಚರ್ಚೆ ನಡೆಸಿದ್ದೇನೆ.ಎಲ್ಲಿಯೂ ಕೂಡ ಅಹಿತಕರ ಘಟನೆ ನಡೆಯದಂತೆ ಎಲ್ಲ ರೀತಿಯ ಬಿಗಿ ಕ್ರಮಗಳನ್ನು ಕೈಗೊಂಡಿದ್ದೇವೆ. ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರೆ ಕ್ರಮ ಜರುಗಿಸುವುದು ಬೇಡ ಎಂದು ಸೂಚಿಸಲಾಗಿದೆ. ಕಾನೂನು ಕೈಗೆತ್ತಿಕೊಂಡರೆ ಶಿಸ್ತುಕ್ರಮ ತೆಗೆದುಕೊಳ್ಳುವಂತೆಯೂ ನಿರ್ದೇಶನ ನೀಡಿದ್ದಾಗಿ ಬೊಮ್ಮಾಯಿ ಸಿಎಂಗೆ ಪರಿಸ್ಥಿತಿಯ ಬಗ್ಗೆ ಸಂಪೂರ್ಣ ವಿವರಣೆ ನೀಡಿದ್ದಾರೆ


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ