Breaking News

ಇಡಿ ಸೇರಿ ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಪಿಎಫ್‍ಐ ಪ್ರತಿಭಟನೆ

Spread the love

ಇಡಿ ಸೇರಿ ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಪಿಎಫ್‍ಐ ಪ್ರತಿಭಟನೆ

ಜಾರಿ ನಿರ್ದೇಶನಾಲಯ (ಇಡಿ) ವನ್ನು ದುರ್ಬಳಕೆ ಮಾಡಬಾರದು ಎಂದು ಆಗ್ರಹಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮುಖಂಡರು ಮತ್ತು ಕಾರ್ಯಕರ್ತರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಮುಖಂಡರು, ಮುಂಚೂಣಿ ಕಾರ್ಯಕರ್ತರ ಮೇಲೆ ಈಡಿ ಮೂಲಕ ದಾಳಿ ನಡೆಸುವ ಮೂಲಕ ಸ್ವಾಯತ್ತ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತದೆ. ಕೇಂದ್ರ ಸರ್ಕಾರ ಈಡಿ, ಆದಾಯಕರ ಇಲಾಖೆ, ಸಿಬಿಐನಂತಹ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಪ್ರತಿಪಕ್ಷಗಳ ಬಾಯಿ ಮುಚ್ಚಿಸುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮುಖಂಡರು ಮತ್ತು ಕಾರ್ಯಕರ್ತರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಹಾಗೂ ಗೃಹ ಸಚಿವ ಅಮಿತ್ ಷಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾ ಅಧ್ಯಕ್ಷ ನವೀದ್ ಕಟಗಿ, ಕಾರ್ಯದರ್ಶಿ ಅಬ್ರಾರ್ ಗರಗ ಮತ್ತಿತರರು ಇದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ