ಬೆಳಗಾವಿ: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅರೆಬೆತ್ತಲಾಗಿ, ತಲೆಯ ಮೇಲೆ ಇಟ್ಟಿಗೆ ಹೊತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಮಕ್ಕಳು ಹಾಗೂ ಕುಟುಂಬ ಸಮೇತರಾಗಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ತಲೆಯ ಮೇಲೆ ಇಟ್ಟಿಗೆ ಹೊತ್ತು, ಮಂಡಿಯಲ್ಲಿ ನಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ಒಂದೆಡೆ ಪ್ರತಿಭಟನಾ ನಿರತ ಸಾರಿಗೆ ನೌಕರರು, ಮಕ್ಕಳನ್ನು ಹೆಗಲ ಮೇಲೆ ಹೊತ್ತು, ಅವರ ಕೈಲಿ ಇಟ್ಟಿಗೆ ಹೊರಿಸಿದರೆ, ಇನ್ನೊಂದೆಡೆ ರಸ್ತೆಯಲ್ಲಿ ಉರುಳುಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Laxmi News 24×7