Breaking News

ಬಿಜೆಪಿ ಶಾಸಕರ ಕಾರು ಅಪಘಾತ; ಇಬ್ಬರು ಸಾವು

Spread the love

 

ಮುಂಬೈ: ಬಿಜೆಪಿ ಶಾಸಕ ಕಿಶನ್ ಕ್ಯಾಥೋರ್ ಅವರ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಮುಂಬೈನ ಟಿಟ್ವಾಲಾದಲ್ಲಿ ನಡೆದಿದೆ.

ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರನ್ನು ಬೈಕ್ ಸವಾರರಾದ ಅಮಿತ್ ಸಿಂಗ್ (22), ಇಮ್ರಾನ್ ಸಿಂಗ್ (18) ಎಂದು ಗುರುತಿಸಲಾಗಿದೆ. ಅಮಿತ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಮ್ರಾನ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮುರ್ಬಾದ್ ಕ್ಷೇತ್ರದ ಶಾಸಕ ಕ್ಯಾಥೋರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಸಕರ ಕಾರು ಚಾಲಕನಿಗೆ ಗಾಯಗಳಾಗಿವೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ