Breaking News
Home / Uncategorized / ಪೀರನವಾಡಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿಯೂ ನರೇಗಾ ಮುಂದುವರಿಸುವಂತೆ ಗ್ರಾ.ಕೂ.ಸ .ಆಗ್ರಹ

ಪೀರನವಾಡಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿಯೂ ನರೇಗಾ ಮುಂದುವರಿಸುವಂತೆ ಗ್ರಾ.ಕೂ.ಸ .ಆಗ್ರಹ

Spread the love

ಪೀರನವಾಡಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿಯೂ ನರೇಗಾ ಮುಂದುವರಿಸುವಂತೆ ಗ್ರಾಕೂಸ ಆಗ್ರಹ

ಗ್ರಾಮ ಪಂಚಾಯತಿಗಳನ್ನು ಮೇಲ್ದರ್ಜೆಗೊಳಿಸಿರುವ ಪಟ್ಟಣ ಪಂಚಾಯತಿಗಳಲ್ಲಿಯೂ ನರೇಗಾ ಉದ್ಯೋಗ ಖಾತ್ರಿಯನ್ನು ಮುಂದುವರಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೂರಾರು ಪದಾಧಿಕಾರಿಗಳು ನೂತನವಾಗಿ ಘೋಷಣೆ ಆಗಿರುವ ಪೀರನವಾಡಿ ಪಟ್ಟಣ ಪಂಚಾಯತಿಯಲ್ಲಿಯೂ ನರೇಗಾ ಉದ್ಯೋಗ ಖಾತ್ರಿ ಯೋಜನೆಯನ್ನು ಆರಂಭಿಸುವಂತೆ ಆಗ್ರಹಿಸಿ ಘೋಷಣೆ ಕೂಗಿ ಆಗ್ರಹಿಸಿದರು.

ನರೇಗಾ ಯೋಜನೆಯನ್ನು ನಗರಪ್ರದೇಶಗಳಿಗೂ ವಿಸ್ತರರಿಸುವಂತೆ ಆಗ್ರಹಿಸಿ ನಾವು ರಾಜ್ಯವ್ಯಾಪಿ ಹೋರಾಟ ಹಮ್ಮಿಕೊಂಡಿದ್ದೇವೆ. ಹೀಗಾಗಿ ಗ್ರಾಮ ಪಂಚಾಯತಿಯಾಗಿದ್ದ ಪೀರನವಾಡಿಯನ್ನು ಪಟ್ಟಣ ಪಂಚಾಯತಿಯಾಗಿ ಸರ್ಕಾರ ಘೋಷಣೆ ಮಾಡಿದೆ. ಈ ಪಂಚಾಯತಿ ವ್ಯಾಪ್ತಿಯಲ್ಲಿ ಸುಮಾರು 500 ಜನರು ನರೇಗಾ ಯೋಜನೆಯಡಿ ಉದ್ಯೋಗ ಪಡೆದುಕೊಂಡು ತಮ್ಮ ಜೀವನ ನಡೆಸುತ್ತಿದ್ದಾರೆ. ಇವರಿಗೆ ಯಾವುದೇ ರೀತಿ ಅನ್ಯಾಯ ಮಾಡದೇ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿಯೂ ನರೇಗಾ ಉದ್ಯೋಗ ಖಾತ್ರಿ ಯೋಜನೆಯನ್ನು ಮುಂದುವರಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಸುತ್ತಿದ್ದೇವೆ ಎಂದು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಮುಖಂಡರು ತಿಳಿಸಿದರು.

ಒಂದು ವೇಳೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಆರಂಭಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಈ ವೇಳೆ ಗ್ರಾಮೀಣ ಕೂಲಿ ಕಾರ್ಮಿಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ನೂರಾರು ಮಹಿಳಾ ಕೂಲಿ ಕಾರ್ಮಿಕರು ಭಾಗಿಯಾಗಿದ್ದರು.


Spread the love

About Laxminews 24x7

Check Also

ಕಾಯಕಲ್ಪಕ್ಕೆ ಕಾದಿದೆ ಶತಮಾನದ ಕೆರೆ

Spread the love ಚಿಕ್ಕೋಡಿ: ‘ಕೆರೆಯನ್ನು ಕಟ್ಟಿಸು. ಬಾವಿಯನ್ನು ಸವೆಸು….’ ಎಂದು ಕನ್ನಡ ಶಾಸನವೊಂದರಲ್ಲಿ ಬರೆದಿರುವುದು ಎಲ್ಲರಿಗೂ ಗೊತ್ತಿದೆ. ಆದರೆ, ಈಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ