Breaking News

ಗೋ ಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ವಿರೋಧ: ಹೆಚ್.ಡಿ.ದೇವೇಗೌಡ

Spread the love

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೋಹತ್ಯೆ ನಿಷೇಧ ವಿಧೇಯಕವನ್ನು ಜಾತ್ಯಾತೀತ ಜನತಾದಳ ಪಕ್ಷವು ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಜೆಡಿಎಸ್ ಅಧ್ಯಕ್ಷ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಾಗ ನಾವು ವಿರೋಧಿಸಿದ್ದೆವು. ಇದೀಗ ಬಿಜೆಪಿ ಸರ್ಕಾರ ಮತ್ತೊಮ್ಮೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ. ಹೀಗಾಗಿ ಈ ವಿಧೇಯಕವನ್ನು ವಿರೋಧಿಸುತ್ತೇವೆ ಎಂದಿದ್ದಾರೆ.

ಗೋಹತ್ಯೆ ನಿಷೇಧ ವಿಧೇಯಕವು ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಆದರೆ ವಿಧಾನ ಪರಿಷತ್ ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇಂದು ವಿಧಾನಪರಿಷತ್ ನ ಒಂದು ದಿನದ ಕಲಾಪ ಕರೆಯಲಾಗಿದೆ. ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆ ವಿಚಾರವೇ ಪ್ರಮುಖವಾಗಿದ್ದರೂ, ಗೋ ಹತ್ಯೆ ನಿಷೇಧ ವಿಧೇಯಕ ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ.

ಸದ್ಯ ಜೆಡಿಎಸ್ ವಿರೋಧ ವ್ಯಕ್ತಪಡಿಸಿರುವ ಕಾರಣ ಗೋಹತ್ಯೆ ನಿಷೇಧ ವಿಧೇಯಕ ಪರಿಷತ್ ನಲ್ಲಿ ಅಂಗೀಕಾರವಾಗುವುದು ಕಷ್ಟ ಎನ್ನಲಾಗಿದೆ.


Spread the love

About Laxminews 24x7

Check Also

ಚಾರ್ಮಾಡಿ ಘಾಟ್‌ನಲ್ಲಿ ಬ್ಯಾರಿಕೇಡ್ ಬದಲಿಗೆ ಹೊಸ ಭೂಮ್ ಬ್ಯಾರಿಯರ್ ವ್ಯವಸ್ಥೆ: ಎಸ್​ಪಿ ಅಮಟೆ

Spread the loveಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಹಾಗೂ ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ದಾರಿಯಾಗಿರುವ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ