ಸುರಪುರ: ತಾಲೂಕಿನ ವಾಗಣಗೇರಾ ಗ್ರಾಮದ ಹನುಮಾನ ದೇವರ ಕಾರ್ತಿಕೋತ್ಸವದ ಅಂಗವಾಗಿ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಗಂಗಾ ಸ್ನಾನಕ್ಕೆಂದು ನದಿಗೆ ಹೋದಾಗ, ನದಿಯಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಹಾಂತೇಶ ಕವಡಿಮಟ್ಟಿ(19) ಮೃತ ಯುವಕ.
ಸೆಳ್ಳಗಿ ಗ್ರಾಮದ ಬಳಿಯಲ್ಲಿನ ಕೃಷ್ಣಾ ನದಿಗೆ ಹನುಮಾನ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಹೋಗಲಾಗಿತ್ತು. ಈ ವೇಳೆ ಗಂಗಾ ಸ್ನಾನಕ್ಕೆಂದು ತೆರಳಿದ ವೇಳೆ ನೀರಿನ ಸುಳಿವಿಗೆ ಸಿಲುಕಿ ಈ ದುರ್ಘಟನೆ ನಡೆದಿದೆ.
ಯುವಕನ ಸಾವಿನ ಸುದ್ದಿ ತಿಳಿದುಗ್ರಾಮದ ಜನರು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ.
Laxmi News 24×7