ಆಂಧ್ರಪ್ರದೇಶ : ರಾಜ್ಯ ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಂಗಳವಾರ ತಿರುಮಲ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ಚಿತ್ತೂರು ಜಿಲ್ಲೆಯ ತಿರುಮಲ ಬೆಟ್ಟದ ಪಟ್ಟಣದಲ್ಲಿನ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ.
ರಾಜ್ಯದಲ್ಲಿ ರಾಜಕೀಯ ಹೈಡ್ರಾಮಾ ನಡೆಯುತ್ತಿದ್ದರೆ, ಸಚಿವ ರಮೇಶ್ ಜಾರಕಿಹೊಳಿ ಅವರು, ತಿಮ್ಮಪ್ಪ ದರ್ಶನಕ್ಕೆ ತೆರಳಿದ್ದಾರೆ. ಜತೆಗೆ ಶಾಸಕ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ಬಿಜೆಪಿ ಮುಖಂಡರು ಇದ್ದಾರೆ.
Laxmi News 24×7