Breaking News

ಮಹಿಳೆ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ

Spread the love

ಹುಬ್ಬಳ್ಳಿ: ಮನೆ ಎದುರು ಗಲಾಟೆ ಮಾಡಿದಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಇಬ್ಬರನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಕೇಶ್ ಹೆಬ್ಬಳ್ಳಿ, ಸಚಿನ್ ಹೆಬ್ಬಳ್ಳಿ ಬಂಧಿತ ಆರೋಪಿಗಳು. ಹೆಗ್ಗರಿ ಬಡಾವಣೆಯಲ್ಲಿ ವಾಸವಿರುವ ಮಹಿಳೆ ಮನೆ ಮುಂದೆ ಸಹೋದರರಿಬ್ಬರು ಗಲಾಟೆ ಮಾಡುತ್ತಿದ್ದರು. ಇಬ್ಬರನ್ನು ಮಹಿಳೆ ಅಲ್ಲಿಂದ ಕಳುಹಿಸಿದ್ದಳು. ಇದೇ ವಿಚಾರವಾಗಿ ರಾತ್ರಿ ಆಕೆ ಮನೆಗೆ ಬಂದ ಇಬ್ಬರು ಚಾಕುವಿನಿಂದ ಇರಿದು, ಹೊಡೆದಿದ್ದರು.

ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಸದ್ಯ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ