Breaking News

ಪರಿಷತ್‍ನಲ್ಲಿ ಗೂಂಡಾಗಿರಿ ಮಾಡಿದವರನ್ನು ಅಮಾನತು ಮಾಡಲಿ : ಸಚಿವ ಸೋಮಶೇಖರ್

Spread the love

ಮೈಸೂರು, ಡಿ.16- ಸಭಾಪತಿಗಳ ಖುರ್ಚಿಗೆ ಅದರದ್ದೇ ಆದ ಗೌರವವಿದೆ. ಆದರೆ, ಮೊದಲ ಬಾರಿ ಎಂಎಲ್ ಸಿ ಆದವರೂ ಸಹ ಆ ಖುರ್ಚಿಯಲ್ಲಿ ಕೂರುತ್ತಾರೆಂದರೆ ಏನರ್ಥ? ಸಭಾಪತಿಗಳ ಮೇಲೆ ಅವಿಶ್ವಾಸ ನಿರ್ಣಯವನ್ನು ನಮ್ಮ ಪಕ್ಷದ ಸದಸ್ಯರು ಮಂಡಿಸಿದ್ದು ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೇ? ಎಲ್ಲರಿಗೂ ನೀತಿ, ಕಾನೂನು ಹೇಳುವ ಅವರು ತಮ್ಮ ಪಕ್ಷದ ನಾಯರಿಗೆ ಬುದ್ಧಿ ಹೇಳಲಿ, ಗೂಂಡಾಗಿರಿ ಮಾಡಿದವರನ್ನು ಅಮಾನತು ಮಾಡಲಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೌರವಾನ್ವಿತ ಹಿರಿಯ ಸದಸ್ಯರೂ ಉಪ ಸಭಾಪತಿಗಳಾದ ಧರ್ಮೇಗೌಡರನ್ನು ಎಳೆದಾಡಿ ಗೂಂಡಾಗಿರಿ ಮಾಡಿದ್ದು , ಹಾಗೆಯೇ ಬಲತ್ಕಾರವಾಗಿ ಕುರ್ಚಿಯಿಂದ ಎಳೆದಾಡಿದ್ದು ಖಂಡನೀಯ. ಇದು ಕಾಂಗ್ರೆಸ್ ಸಂಸ್ಕøತಿಯನ್ನು ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ನೈಋತ್ಯ ರೈಲ್ವೆಗೆ ಸೆಪ್ಟೆಂಬರ್​ನಲ್ಲಿ ಭರ್ಜರಿ ಆದಾಯ: ಸರಕು ಸಾಗಣೆಯಿಂದ ₹427, ಪ್ರಯಾಣಿಕರಿಂದ ₹282 ಕೋಟಿ ಗಳಿಕೆ

Spread the love ಹುಬ್ಬಳ್ಳಿ: ಸೆ. 2025ರಲ್ಲಿ ನೈಋತ್ಯ ರೈಲ್ವೆಯು ಸರಕು ಸಾಗಣೆ ಮತ್ತು ಆದಾಯದಲ್ಲಿ ಅತ್ಯುತ್ತಮ ಸಾಧನೆ ದಾಖಲಿಸಿದೆ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ