Breaking News

ಸಿಐಡಿ DySP ಲಕ್ಷ್ಮೀ ಆತ್ಮಹತ್ಯೆ ಸುತ್ತ ಅನುಮಾನದ ಹುತ್ತ..!

Spread the love

ಬೆಂಗಳೂರು, ಡಿ.17- ಸಿಐಡಿ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್‍ಪಿ ಲಕ್ಷ್ಮಿ (33) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಅನ್ನಪೂರ್ಣೇಶ್ವರಿ ನಗರದ ಪರಿಚಿತರ ಮನೆಯಲ್ಲಿ ಲಕ್ಷ್ಮಿ ಅವರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಡಿವೈಎಸ್‍ಪಿ ಲಕ್ಷ್ಮಿ ಅವರ ಆತ್ಮಹತ್ಯೆಗೆ ನಿಖರ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.

ಲಕ್ಷ್ಮಿ ಅವರು 2014ರ ಬ್ಯಾಚ್‍ನ ಕೆಎಸ್‍ಪಿಎಸ್ ಅಧಿಕಾರಿ, 2017ರಲ್ಲಿ ಸಿಐಡಿ ಘಟಕದಲ್ಲಿ ಡಿವೈಎಸ್‍ಪಿ ಆಗಿ ಅವರು ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿಯವರಾದ ಲಕ್ಷ್ಮಿ ಅವರು ತಮ್ಮ ಕುಟುಂಬದ ಸದಸ್ಯರ ಜತೆ ಬೆಂಗಳೂರಿನ ಕೋಣನಕುಂಟೆಯಲ್ಲಿ ವಾಸವಾಗಿದ್ದರು.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ