Breaking News

ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ 49,960 ರೂ. ಇದ್ದ ಬೆಲೆ ಇಂದು 50,410ಕ್ಕೆ ಏರಿಕೆ

Spread the love

ಕಳೆದ ವಾರ ಭಾರತದಲ್ಲಿ 10 ಗ್ರಾಂಗೆ 49,250 ರೂ. ಇದ್ದ ಚಿನ್ನದ ಬೆಲೆ ಇಂದು 49,320 ರೂ. ಆಗಿದೆ. ಅಲ್ಪ ಏರಿಳಿತಗಳನ್ನು ಬಿಟ್ಟರೆ 10 ದಿನಗಳಿಂದ ಚಿನ್ನದ ಬೆಲೆಯಲ್ಲಿ ಹೆಚ್ಚೇನೂ ಬದಲಾವಣೆಯಾಗಿಲ್ಲ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 50,410 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 46,210 ರೂ. ಇದೆ. ಭಾರತದಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,320 ರೂ. ಆಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 49,320 ರೂ. ಆಗಿದೆ. ಇದು ಆಯಾ ನಗರಗಳಲ್ಲಿ ವ್ಯತ್ಯಾಸವಾಗಲಿದೆ.

ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ 49,960 ರೂ. ಇದ್ದ ಬೆಲೆ ಇಂದು 50,410ಕ್ಕೆ ಏರಿಕೆಯಾಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 46,210 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಎರಡು ದಿನಗಳಿಂದ ಬೆಂಗಳೂರಿನಲ್ಲಿ ಕಡಿಮೆಯಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಹೆಚ್ಚಾಗಿದೆ.


Spread the love

About Laxminews 24x7

Check Also

ದೇವೇಗೌಡರ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ ಹೊತ್ತ ಜೆಡಿಎಸ್ ಕಾರ್ಯಕರ್ತರು

Spread the love ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ