Breaking News

ಯಮಕನಮರಡಿ ಫೈರಿಂಗ ಕೊಡಲೇ ತಪಿತಸ್ಥ ಆರೋಪಿಗಳನ್ನು ಬಂಧಿಸಬೇಕ: ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ: ಹುಕ್ಕೆರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಡೆದಿರುವ ಗುಂಡಿನ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ಕೊಡಲೇ ತಪಿತಸ್ಥ ಆರೋಪಿಗಳನ್ನು ಬಂಧಿಸಬೇಕೆಂದು ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜು ತಳವಾರಗೆ ರಾಜಕೀಯ ರಕ್ಷಣೆ ಇದೆ. ಅಂಕಲಗಿ ಗ್ರಾಮದಲ್ಲಿ ಮತ್ತೆ ಗುಂಡಾಗಿರಿ ನಡೆದಿದೆ. ಕಳೆದ 6 ತಿಂಗಳಲ್ಲಿ ಮೂರು ಸಲ ಇಂತಹ ಘಟನೆ ನಡೆದಿದೆ. ಇಲ್ಲಿಭಯದ ವಾತಾವರಣ ಮುಂದುವರೆದಿದ್ದು, ಪೊಲೀಸರು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಗಲಾಟೆಯಾದ ಎರಡು ಕುಟುಂಬಗಳು ಸಂಬಂಧಿಕರು ಎಂಬ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೌದು ಇಬ್ಬರು ಸಂಬಂಧಿಕರು ಆದರೆ ಪಕ್ಷ ಬೇರೆ ಬೇರೆ ಇದೆ. ಸಂಧಾನದ ಅವಶ್ಯಕತೆ ಇಲ್ಲ ಕಠಿಣ ಕ್ರಮ ಕೈಗೊಳ್ಳಬೇಕು. ಟೈಗರ್ ಗ್ಯಾಂಗ್ ರೀತಿಯಲ್ಲಿ ಇದನ್ನು ಮಟ್ಟ ಹಾಕಬೇಕು.ದೊಡ್ಡ ಪ್ರಮಾಣದ ಹಣ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ