Breaking News

ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಗೆ ಮುಹೂರ್ತ ನಿಗದಿ

Spread the love

ಬೆಂಗಳೂರು,ಡಿ.17-ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಗೆ ಮುಹೂರ್ತ ನಿಗದಿಯಾಗಿದೆ. ರಾಜ್ಯಸಭಾ ಸದಸ್ಯರೂ ಆದ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅಧ್ಯಕ್ಷತೆಯಲ್ಲಿ ಇದೇ 19ರಂದು ಕೋರಮಂಗಲದ ಕಲಾದ್ವಾರಕಾ ಸಭಾಂಗಣದಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಅಂದು ಬೆಳಿಗ್ಗೆ 10.30ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರು ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಲಿದ್ದಾರೆ.

ಕಾರ್ಯಕಾರಿಣಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇತ್ತೀಚೆಗೆ ಜಾರಿಗೊಳಿಸಿದ ರೈತಪರ ಕೃಷಿ ಸುಧಾರಣಾ ಮಸೂದೆಗಳನ್ನು ಬೆಂಬಲಿಸಿ ಅಭಿನಂದಿಸುವ ನಿರ್ಣಯಗಳನ್ನು ಮಂಡಿಸಿ ಅನುಮೋದಿಸಲಾಗುವುದು. ರೈತರ ವಾರ್ಷಿಕ ವರಮಾನ ದ್ವಿಗುಣಗೊಳಿಸಿ ರೈತರ ಆರ್ಥಿಕ ಸಬಲೀಕರಣಕ್ಕಾಗಿ ತಂದ ಕಾಯ್ದೆಗಳ ಬಗ್ಗೆ ಸಂವಾದ ಕಾರ್ಯಕ್ರಮವನ್ನು ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಂಚಾಲಕ ಸಮೀರ್ ಕಾಗಲ್ಕರ್ ನಡೆಸಿಕೊಡಲಿದ್ದಾರೆ.ಕೇಂದ್ರ ಸರ್ಕಾರ ಇತ್ತೀಚೆಗೆ ದೇಶದಲ್ಲಿ 10,000 ಎಫ್‍ಟಿಒಗಳ (ಕೃಷಿ ಉತ್ಪನ್ನ ಸಂಘ) ರಚನೆ ಗುರಿ ಹೊಂದಿದ್ದು, ಕರ್ನಾಟಕದಲ್ಲಿ ಎಫ್‍ಟಿಒ ರಚನೆಯ ಕುರಿತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾರ್ಗದರ್ಶನ ನೀಡಲಿದ್ದಾರೆ. ಅಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾರ್ಗದರ್ಶನ ನೀಡಲಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ