Home / ರಾಜ್ಯ / ಬಂಡೀಪುರದಲ್ಲಿ ಮೋಜು ಮಸ್ತಿಗೆ ಬ್ರೇಕ್

ಬಂಡೀಪುರದಲ್ಲಿ ಮೋಜು ಮಸ್ತಿಗೆ ಬ್ರೇಕ್

Spread the love

ಮೈಸೂರು, ಡಿ. 18- ಬಂಡೀಪುರ, ಬಿಆರ್ ಹಿಲ್ಸ್‍ನಲ್ಲಿ ಹೊಸ ವರ್ಷದ ಮೋಜು ಮಸ್ತಿಗೆ ಬ್ರೇಕ್ ಹಾಕಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಮೋಜು, ಮಸ್ತಿಗೆ ಕಡಿವಾಣ ಹಾಕಿರುವ ಅರಣ್ಯ ಇಲಾಖೆ ಎರಡು ದಿನಗಳ ಕಾಲ ಪ್ರವಾಸಿಗರ ವಾಸ್ತವ್ಯಕ್ಕೆ ಸಂಪೂರ್ಣ ನಿಷೇಧ ಹೇರಿದೆ. ಡಿ.31 ಹಾಗೂ ಜ.1ರಂದು ಪ್ರವಾಸಿಗರ ವಾಸ್ತವ್ಯ ನಿಷೇಧಿಸಲಾಗಿದೆ.

ಪ್ರವಾಸಿಗರು ಪ್ರತಿ ವರ್ಷ ಬಂಡೀಪುರ ಹಾಗೂ ಬಿಳಿಗಿರಿ ರಂಗನ ಬೆಟ್ಟದ ಹುಲಿ ಸಂರಕ್ಷಿತಾರಣ್ಯದಲ್ಲಿ ಹೊಸ ವರ್ಷಾಚರಣೆಯನ್ನು ಸಂಭ್ರಮದಿಂದ ಆಚರಿಸುತ್ತಿದ್ದರು. ಆದರೆ, ಈ ಬಾರಿ ಸಂಭ್ರಮಾಚರಣೆಗೆ ಅರಣ್ಯ ಇಲಾಖೆ ಬ್ರೇಕ್ ಹಾಕಲಾಗಿದೆ.ಹೊಸ ವರ್ಷಾಚರಣೆಗೆ ಪ್ರವಾಸಿಗರ ಬುಕ್ಕಿಂಗ್‍ಗಳಿಂದ ಭರ್ತಿಯಾಗುತ್ತಿದ್ದ ಕಾಟೇಜ್ ಡಾರ್ಮೆಟರಿಗಳನ್ನು ಅರಣ್ಯ ಇಲಾಖೆ ಈ ಬಾರಿ ಎರಡು ದಿನಗಳ ಕಾಲ ಆನ್‍ಲೈನ್ ಮೂಲಕ ಬುಕ್ ಮಾಡಿರುವುದನ್ನು ಬ್ಲಾಕ್ ಮಾಡಿದ್ದಾರೆ. ಆದರೆ ಎಂದಿನಂತೆ ಬೆಳಗ್ಗೆ ಹಾಗೂ ಸಂಜೆ ಸಫಾರಿ ಇರಲಿದೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ