Breaking News

13 ಕಡೆ ಎಸಿಬಿ ದಾಳಿ, ಅಧಿಕಾರಿಗಳಿಗೆ ಶಾಕ್..!

Spread the love

ಬೆಂಗಳೂರು, ಡಿ.18- ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿ ಆಧರಿಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ತಂಡ ಇಂದು ಮೈಸೂರು, ಹಾಸನ ಮತ್ತು ಬೆಳಗಾವಿ ಜಿಲ್ಲೆಯಾದ್ಯಂತ 13 ಸ್ಥಳಗಳಲ್ಲಿ ದಾಳಿ ನಡೆಸಿದೆ. ಬಲೆಗೆ ಬಿದ್ದಿರುವ ಅಧಿಕಾರಿಗಳನ್ನು ಮೈಸೂರಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರಸ್ವಾಮಿ, ಹಾಸನದ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಎಂಜಿನಿಯರ್ ವಿ.ಎಸ್. ಅಶ್ವಿನಿ ಹಾಗೂ ಬೆಳಗಾವಿಯ ಲೋಕೋಪ ಯೋಗಿ ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆಯ ಸಹಾಯಕ ಅಭಿಯಂತರ ಮನೋ ಜ್ ಸುರೇಶ್ ಕವಳೇಕರ ಬಲೆಗೆ ಬಿದ್ದಿರುವ ಅಧಿಕಾರಿಗಳೆಂದು ತಿಳಿದು ಬಂದಿದೆ.

ಶಿವಶಂಕರ ಸ್ವಾಮಿ ಅವರ ಮೈಸೂರಿನ ಅಶೋಕನಗರದಲ್ಲಿರುವ ಮನೆ, ಮಾವನ ಹೆಸರಿನಲ್ಲಿರುವ ಸರಸ್ವತಿಪುರಂನಲ್ಲಿರುವ ನಿವಾಸ ಹಾಗೂ ಅವರ ತಂದೆ ವಾಸವಾಗಿರುವ ಮಂಡ್ಯ ಜಿಲ್ಲೆ, ಮಳವಳ್ಳಿ ತಾಲ್ಲೂಕಿನ ಮೂಗನೂರು ಗ್ರಾಮದಲ್ಲಿರುವ ನಿವಾಸ ಹಾಗೂ ಸ್ನೇಹಿತ ವಾಸವಾಗಿರುವ ಮೈಸೂರಿನ ಕೆಸಿ ಬಡಾವಣೆಯ ಮನೆ ಮತ್ತು ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ ನಗದು ಹಾಗೂ ಕೆಲ ಆಸ್ತಿ ಪತ್ರಗಳು ಪತ್ತೆಯಾಗಿದ್ದು, ಪ್ರಕ್ರಿಯೆ ಜಾರಿಯಲ್ಲಿದೆ.


Spread the love

About Laxminews 24x7

Check Also

ಪಂಚ ಗ್ಯಾರಂಟಿಗಳಿಗಾಗಿ ₹63 ಸಾವಿರ ಕೋಟಿ ಸಾಲ ಮಾಡಿದ ರಾಜ್ಯ ಸರ್ಕಾರ: ಸಿಎಜಿ ವರದಿ

Spread the love ಬೆಂಗಳೂರು: ಪಂಚ ಗ್ಯಾರಂಟಿಗಳಿಗಾಗಿ 2023-24 ಸಾಲಿನಲ್ಲಿ ಸಂಪನ್ಮೂಲ ಒದಗಿಸಲು ರಾಜ್ಯ ಸರ್ಕಾರ 63 ಸಾವಿರ ಕೋಟಿ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ