ಹಾವೇರಿಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆ ನಡೆಸಲಾಯಿತು. ಸಮ್ಮೇಳನ ಮಾಡುವುದು ಅಂದರೆ ಸುಲಭದ ಕೆಲಸವಲ್ಲ. ಪ್ರತಿಯೊಬ್ಬರು ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ಮಾತ್ರ ಸಮ್ಮೇಳನ ಯಶಸ್ವಿ ಆಗುತ್ತದೆ. ಒಳಗೊಳಗೆ ಕಿತ್ತಾಟ, ವೈಮನಸ್ಸು ಇಟ್ಟುಕೊಂಡು ಸಮ್ಮೇಳನ ಮಾಡುವುದಾದರೆ ಬೇಡ. ಅಂತಹ ಸಮ್ಮೇಳನ ಮಾಡಿ ಜಿಲ್ಲೆಗೆ ಕೆಟ್ಟ ಹೆಸರು ತರುವುದು ಬೇಡ. ಊಟಕ್ಕೆ ಸೀಮಿತವಾದ ಸಮ್ಮೇಳನ ಮಾಡುವ ಬದಲು ಹೊಸತನದ ಸಮ್ಮೇಳನ ಮಾಡೋಣ. ಅಧಿಕಾರಿಗಳು, ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸಾಹಿತಿಗಳು ಉತ್ತಮವಾಗಿ ಕೆಲಸ ಮಾಡಿ ಸಮ್ಮೇಳನದ ಯಶಸ್ಸಿಗೆ ಶ್ರಮಿಸುವಂತೆ ಹೇಳಲಾಯಿತು. ಸಭೆಯಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ, ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮನು ಬಳಿಗಾರ, ಶಾಸಕರಾದ ನೆಹರು ಓಲೇಕಾರ, ಅರುಣಕುಮಾರ ಪೂಜಾರ, ವಿರುಪಾಕ್ಷಪ್ಪ ಬಳ್ಳಾರಿ, ಸಂಸದ ಶಿವಕುಮಾರ ಉದಾಸಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಏಕನಾಥ ಬಾನುವಳ್ಳಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸಾಹಿತ್ಯಾಭಿಮಾನಿಗಳು ಭಾಗವಹಿಸಿದ್ದರು.
Laxmi News 24×7