Breaking News

ಸಿದ್ದರಾಮಯ್ಯ ಅವರ ಹೇಳಿಕೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ: ಶಾಸಕ ಸತೀಶ್ ಜಾರಕಿಹೊಳಿ

Spread the love

ಯಮಕನಮರಡಿ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಒಳ ಒಪ್ಪಂದ ಕಾರಣ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಲ್ಲ. ಅದನ್ನು ಇಷ್ಟು ದೊಡ್ಡದು ಮಾಡುವ ಅವಶ್ಯಕತೆಯೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಕೇವಲ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ. ಸ್ಥಳೀಯ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಎಲ್ಲರೂ ಈ ಹೇಳಿಕೆಗೆ ಅಭಿಪ್ರಾಯ ನೀಡುವುದು ಸೂಕ್ತವಲ್ಲ ಎಂದು ಹೇಳಿದರು.‌

ಕಳೆದ ಆರು ತಿಂಗಳಿನಿಂದ ರಾಜ್ಯ ಸರ್ಕಾರ ಶಾಲೆ ಆರಂಭಿಸುವುದಾಗಿ ಹೇಳುತ್ತಲೇ ಬಂದಿದೆ. ಈ ವಿಷಯದಲ್ಲಿ ಸರ್ಕಾರವೇ ಗೊಂದಲದಲ್ಲಿದೆ. ಮೊದಲು ಪೋಷಕರು, ಖಾಸಗಿ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಒಂದು ಒಳ್ಳೆಯ ನಿರ್ಧಾರಕ್ಕೆ ಬರುವುದು ಸೂಕ್ತ ಎಂದು ಸಲಹೆ ನೀಡಿದರು.

ವಿಜೇತರಿಗೆ ಹೆಲಿಕಾಪ್ಟರ್ ರೈಡಿಂಗ್ :
ನಮ್ಮ ಮಾನವ ಬಂಧುತ್ವ ವೇದಿಕೆ ವತಿಯಿಂದ ಈ ಬಾರೀ ವಿನೂತನವಾಗಿ ಸಾವಿತ್ರಿಬಾಯಿ‌ ಫುಲೆ ಅವರ ಜಯಂತೋತ್ಸವ ಆಚರಿಸಲು ನಿರ್ಧರಿಸಲಾಗಿದ್ದು, ರಾಜ್ಯ‌ ಮಟ್ಟದ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾದ 10 ಜನರಿಗೆ ಹೆಲಿಕಾಪ್ಟರ್ ನಲ್ಲಿ ರೈಡಿಂಗ್ ಅವಕಾಶ ನೀಡಲಾಗುತ್ತಿದೆ ಎಂದು ಹೇಳಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ