ನವದೆಹಲಿ,ಡಿ.21-ಕೇಂದ್ರ ಸರ್ಕಾರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾ ನಿರತರು ಇಂದಿನಿಂದ ಸರಣಿ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ. ಹರಿಯಾಣ, ಉತ್ತರಪ್ರದೇಶ ಗಡಿ ಭಾಗದಲ್ಲಿ ಕೊರೆಯುವ ಚಳಿಯಲ್ಲೂ ಪ್ರತಿಭಟನೆ ನಡೆಸುತ್ತಿರುವ ರೈತರು ಒಂದೊಂದು ತಂಡದಂತೆ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ.

ಮೊದಲ ಹಂತದಲ್ಲಿ 11 ಮಂದಿ ರೈತ ಮುಖಂಡರು ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ ಎಂದು ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ತಿಳಿಸಿದ್ದಾರೆ. ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ 11 ರೈತರು ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ ಎಂದು ಹೇಳಿದ್ದಾರೆ.

Laxmi News 24×7