Breaking News

ಕಾಂಗ್ರೆಸ್ ಪಕ್ಷವು ಜೆಡಿಎಸ್ ಕತ್ತು ಹಿಸುಕುವ ಪ್ರಯತ್ನಕ್ಕೆ ಮುಂದಾಗಿದೆ

Spread the love

ಬೆಂಗಳೂರು,ಡಿ.21- ಕಾಂಗ್ರೆಸ್ ಪಕ್ಷವು ಜೆಡಿಎಸ್ ಕತ್ತು ಹಿಸುಕುವ ಪ್ರಯತ್ನಕ್ಕೆ ಮುಂದಾಗಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಆ ಕಾರಣಕ್ಕಾಗಿ ಅನಿವಾರ್ಯವಾಗಿ ಕೆಲವು ನಿರ್ಧಾರಗಳನ್ನು ಮಾಡಿದ್ದೇವೆ ಎಂದಿದ್ದಾರೆ. ಕಾಂಗ್ರೆಸ್‍ನ ಕೆಲವು ನಾಯಕರು ಹಾಗೂ ಜೆಡಿಎಸ್‍ನಿಂದ ಹೋದವರೆ ಈಗ ಜೆಡಿಎಸ್ ಮುಗಿಸಲು ಪ್ರಯತ್ನಿಸುತ್ತಿದ್ದಾರೆ.

ನನ್ನ ನಿಜವಾದ ರಾಜಕಾರಣ ಶುರುವಾಗುವುದು 2023ಕ್ಕೆ ಇದುವರೆಗಿನ ರಾಜಕಾರಣ ತಾತ್ಕಾಲಿಕವಾಗಿ ಮಾಡಿದ್ದು, 2023ಕ್ಕೆ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದು ಸುದ್ದಿಗಾರರಿಗೆ ತಿಳಿಸಿದರು

ಕಾಂಗ್ರೆಸ್‍ನ ಕೆಲವು ನಾಯಕರಿಂದ ನಮಗೆ ಹಿನ್ನಡೆಯಾಗಿದೆ. ಉಪ ಚುನಾವಣೆ ಯಾವುದೇಮಾನದಂಡ ಅಲ್ಲ. ಪಕ್ಷದಿಂದ ಕಾಲು ಹೊರಗಿಟ್ಟವರು ಕೆಲವು ಹೇಳಿಕೆ ಕೊಡುತ್ತಾರೆ. ಅದಕ್ಕೆ ತಲೆ ಕೆಡಿಸಿಕೊಳ್ಳುವುದು ಬೇಡ ಎಂದು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಕಾರಣದ ಊಹಾಪೋಹಗಳನ್ನು ಗಮನಿಸಿದ್ದೇನೆ. ಜೆಡಿಎಸ್‍ನ್ನು ಯಾವುದೇ ಪಕ್ಷದ ಜೊತೆ ವಿಲೀನ ಮಾಡುವುದಿಲ್ಲ. ನಾವು ಬದುಕಿರುವವರೆಗೂ ಜೆಡಿಎಸ್ ಬೇರೊಂದು ಪಕ್ಷದ ಜೊತೆ ವಿಲೀನವಾಗುವುದಿಲ್ಲ ಎಂದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ 60 ವರ್ಷದ ರಾಜಕಾರಣದಲ್ಲಿ 4-5 ವರ್ಷ ಮಾತ್ರ ಅವರು ಅಧಿಕಾರದಲ್ಲಿದ್ದರು ಅಷ್ಟೆ. ಡಿಎಂಕೆ, ನಿತೀಶ್ ಕುಮಾರ್ ಮೊದಲಾದವರು ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡರ ಜೊತೆಗೂ ಹೋಗಿದ್ದಾರೆ. ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ದಾಂತವು ಇಲ್ಲಾ. ಪ್ರತಿಯೊಂದು ಪಕ್ಷವು ಅಧಿಕಾರ ಹೇಗೆ ಹಿಡಿಯಬೇಕು ಎಂಬುದನ್ನಷ್ಟೇ ನೋಡುತ್ತಿರುತ್ತವೆ ಎಂದು ಹೇಳಿದರು.


Spread the love

About Laxminews 24x7

Check Also

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ

Spread the loveಬೆಂಗಳೂರು: ಗ್ಯಾರಂಟಿ ಯೋಜನೆಗಳ  ಪರಿಷ್ಕರಣೆ ಮಾಡುತ್ತೇವೆ, ಆದರೆ ಸಿಎಂ, ಸಚಿವರು ಇನ್ನೂ ಈ ಬಗ್ಗೆ ಮಾತನಾಡಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ