ಮುಂಬೈ: ಕೊರೊನಾ ಸೋಂಕು ಮತ್ತೆ ಉಲ್ಬಣಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿನಾಳೆಯಿಂದ ಮತ್ತೆ ನೈಟ್ ಕರ್ಫ್ಯೂ ಘೋಷಣೆ ಮಾಡಲಾಗಿದೆ.
ಮಹಾರಾಷ್ಟ್ರದ ಎಲ್ಲಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ ಅಂತಾ ಉದ್ಧವ್ ನೇತೃತ್ವದ ಸರ್ಕಾರ ತಿಳಿಸಿದೆ. ನಾಳೆ ರಾತ್ರಿ 11 ಗಂಟೆಯಿಂದ ಜನವರಿ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ.
ಒಂದು ಸಮಯದಲ್ಲಿ ಕೊರೊನಾ ಹಾಟ್ಸ್ಪಾಟ್ ಆಗಿ ಮಹಾರಾಷ್ಟ್ರ ಬದಲಾಗಿತ್ತು. ಸದ್ಯ ಮಹಾರಾಷ್ಟ್ರದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಇದೀಗ ಇಂಗ್ಲೆಂಡ್ನಲ್ಲಿ ರೂಪಾಂತರಗೊಂಡಿರುವ ಕೊರೊನಾ ಉಲ್ಬಣಿಸಿದೆ ಅನ್ನೋ ಸುದ್ದಿ ಬರಸಿಡಲಿನಂತೆ ಬಂದಿದೆ. ಜೊತೆಗೆ ಕ್ರಿಸ್ಮಸ್ ಹಬ್ಬ, ಹೊಸ ವರ್ಷಾಚರಣೆ, ಸಂಕ್ರಾಂತಿ ಹಬ್ಬ ಜೊತೆ ಜೊತೆಗೆ ಎದುರಾಗಲಿವೆ. ಈ ವೇಳೆ ಕೊರೊನಾ ಸೋಂಕು ಹೆಚ್ಚಾಗುವ ನಿರೀಕ್ಷೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ನಾಳೆಯಿಂದ ನೈಟ್ ಕರ್ಫ್ಯೂ ಜಾರಿ ಮಾಡಿದೆ
Laxmi News 24×7