Breaking News

ಕೊರೊನಾ ಹೊಸ ರೂಪಾಂತರ ವೈರಸ್ ಹರಡುತ್ತಿದೆ. ರಾಜ್ಯದ ಜನತೆ ಕಡ್ಡಾಯವಾಗಿ ಮಾಸ್ಕ್ ಧರಿಸಿ,

Spread the love

ಬೆಂಗಳೂರು: ರಾಜ್ಯದಲ್ಲೂ ಕೊರೊನಾ ಹೊಸ ಪ್ರಭೇದ ಬಗ್ಗೆ ಆತಂಕ ಮೂಡುತ್ತಿದ್ದು, ಈಗಾಗಲೇ ಇಂಗ್ಲೆಂಡ್ ನಲ್ಲಿ ಕೊರೊನಾ ಹೊಸ ರೂಪಾಂತರ ವೈರಸ್ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಲುವ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ದಾ.ಸುಧಾಕರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ಹೊಸ ರೂಪಾಂತರ ವೈರಸ್ ಕೊರೊನಾ ವೈರಸ್ ಗಿಂತಲೂ ಹೆಚ್ಚು ವೇಗವಾಗಿ ಹರಡುತ್ತದೆ. ಹೀಗಾಗಿ ಈ ಬಗ್ಗೆ ಇರ್ಲಕ್ಷ್ಯ ಬೆಡ. ರಾಜ್ಯದ ಜನತೆ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ, ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ರೋಗ ಲಕ್ಷಗಳು ಕಂಡುಬಂದಲ್ಲಿ ತಕ್ಷಣ ಚಿಕಿತ್ಸೆಗೆ ಒಳಪಡಬೇಕು ಎಂದರು.

ಇಂಗ್ಲೆಂಡ್ ನಲ್ಲಿ ಕೊರೊನಾ ಹೊಸ ರೂಪಾಂತರ ಪ್ರಭೇದ ಪತ್ತೆಯಾಗಿರುವುದರಿಂದ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ನಾಳೆಯಿಂದ ಅಲ್ಲಿಂದ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 31ರವರೆಗೆ ರದ್ದು ಮಾಡಲಾಗಿದೆ. ಈಗಾಗಲೇ 138 ಪ್ರಯಾಣಿಕರು ಯುಕೆಯಿಂದ ಆಗಮಿಸಿದ್ದು, ಅವರೆಲ್ಲರನ್ನೂ ಆರ್ ಟಿಸಿಆರ್ ಟೆಸ್ಟ್ ಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗುವುದು. ನಾಳೆಯಿಂದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ವಿದೇಶದಿಂದ ಬರುವವರ ಮೇಲೆ ನಿಗಾ ವಹಿಸಲಾಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ