Breaking News

ಗ್ರಾಮ ಪಂಚಾಯಿತಿ ಚುನಾವಣೆ ಊರಿನತ್ತ ಹೊರಟ ಮತದಾರರು

Spread the love

ಬೆಂಗಳೂರು (ಡಿ. 22): ಕರ್ನಾಟಕದಲ್ಲಿ ಇಂದಿನಿಂದ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ರಾಜ್ಯದ 30 ಜಿಲ್ಲೆಗಳಲ್ಲಿಯೂ ಆಯ್ದ ತಾಲೂಕುಗಳಲ್ಲಿ ಇಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನ ಮಾಡಲು ಬೆಂಗಳೂರಿನಲ್ಲಿ ನೆಲೆಸಿರುವ ಬಹುತೇಕ ಜನರು ತಮ್ಮ ಊರುಗಳತ್ತ ಹೊರಟಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಮೆಜೆಸ್ಟಿಕ್ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನೆರೆದ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ಹೊರಡಲು ಬಸ್​ಗಳಿಗೆ ಕಾಯುತ್ತಿದ್ದ ದೃಶ್ಯ ಕಂಡುಬಂದಿತು. ಮಧ್ಯಾಹ್ನದ ವೇಳೆಗೆ ಊರುಗಳಿಗೆ ತೆರಳಿ ಮತದಾನ ಮಾಡಲು ಮುಂದಾಗಿರುವ ಜನರು ಬೆಳಗ್ಗೆಯೇ ಬೆಂಗಳೂರಿನಿಂದ ಹೊರಟಿದ್ದಾರೆ. ಇನ್ನು ಅನೇಕರು ನಿನ್ನೆ ರಾತ್ರಿ ಬಸ್​ಗೇ ಊರಿಗೆ ತೆರಳಿದ್ದಾರೆ. ಹೀಗಾಗಿ, ಬಸ್​ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದವು.

ಇಂದು ಬೆಳಗ್ಗೆಯೇ ಬೆಂಗಳೂರಿನಿಂದ ಹೊರಟರೆ ಮಧ್ಯಾಹ್ನದ ವೇಳೆಗೆ ಊರು ತಲುಪಬಹುದು ಎಂದು ಜನರು ಪ್ರಯಾಣ ಮಾಡುತ್ತಿದ್ದಾರೆ. ಶಿವಮೊಗ್ಗ, ಕಡೂರು, ಪಾವಗಡ, ಭದ್ರಾವತಿ ಕಡೆಗೆ ತೆರಳುವ ಬಸ್​ಗಳು ಪೂರ್ತಿ ರಷ್ ಆಗಿವೆ. ಇಂದು ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿರುವುದರಿಂದ ಜನರು ಬೆಂಗಳೂರಿನಿಂದ ತಮ್ಮ ಊರುಗಳತ್ತ ಹೊರಟಿದ್ದಾರೆ. ತಡರಾತ್ರಿವರೆಗೆ ಕೆಎಸ್ಆರ್​ಟಿಸಿ ಬಸ್ ಗಳಲ್ಲಿ ಊರುಗಳತ್ತ ಮುಖ ಮಾಡಿದ ಜನರು ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಮತದಾನ ಮಾಡುವ ಸಲುವಾಗಿ ಊರುಗಳಿಗೆ ಪಯಣ ಬೆಳೆಸಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ