Breaking News

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಪೆಟ್ರೋಲ್ ಬಂಕ್ ಬಳಿ ಎಸೆದು ಹೋಗಿರುವ ಘಟನೆ

Spread the love

ಮುಂಬೈ: ನಾಲ್ಕು ವರ್ಷದ ಬಾಲಕಿಯ ಮೇಲೆ ಬಸ್ ಚಾಲಕನೊಬ್ಬ ಅತ್ಯಾಚಾರವೆಸಗಿ, ಬಳಿಕ ಬಾಲಕಿಯನ್ನು ಗೋಣಿ ಚೀಲದಲ್ಲಿ ತುಂಬಿ ಮುಂಬೈ-ಅಹ್ಮದಾಬಾದ್ ಹೆದ್ದಾರಿ ಬಳಿಯ ಪೆಟ್ರೋಲ್ ಬಂಕ್ ಬಳಿ ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.

ಮಾರನೆ ದಿನ ಬೆಳಿಗ್ಗೆ ಗೋಣಿ ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಹತ್ತಿರ ಬಂದು ಪರಿಶೀಲಿಸಿದಾಗ ಅದರಲ್ಲಿ ಬಾಲಕಿ ಇರುವುದು ಕಂಡು ದಂಗಾಗಿದ್ದಾರೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪಾರ್ಕ್ ಮಾಡಿದ್ದ ಲಕ್ಸುರಿ ಬಸ್ ಬಳಿ ಬಾಲಕಿ ಇತರ ಮಕ್ಕಳ ಜೊತೆ ಆಟವಾಡುತ್ತಿದ್ದಳು. ಆಟವಾಡುತ್ತಾ ಮಕ್ಕಳು ಬಸ್ ನಲ್ಲಿ ಹತ್ತುವುದು ಇಳಿಯುವುದು ಮಾಡಿದ್ದಾರೆ. ಈ ವೇಳೆ ಬಾಲಕಿಯೊಬ್ಬಳನ್ನೇ ಬಿಟ್ಟು ಉಳಿದ ಮಕ್ಕಳು ಬಸ್ ಇಳಿದಿದ್ದಾರೆ. ಈ ವೇಳೆ ಬಸ್ ಚಾಲಕ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಯಾಚಾರವೆಸಗಿ ಗೋಣಿಚೀಲದಲ್ಲಿ ತುಂಬಿ ಬಿಸಾಕಿದ್ದಾನೆ. ಸಿಸಿಟಿವಿ ಮೂಲಕ ಆರೋಪಿ ಪತ್ತೆ ಹಚ್ಚಿರುವ ಪೊಲೀಸರು ಬಸ್ ಚಾಲಕನನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಮಹಾ ಸಂಸದ ಮಾನೆ,ವಿರುದ್ಧ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವಂತೆ ಆಗ್ರಹಿಸಿ ಸಂಸದೆ ಪ್ರಿಯಾಂಕಾಗೆ ಕರವೇ ಮನವಿ

Spread the love ಗೋಕಾಕ ಡಿ 24 : ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ, ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ