Breaking News

ಡೀಸೆಲ್ ಟ್ಯಾಂಕರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ

Spread the love

: ಡೀಸೆಲ್ ಟ್ಯಾಂಕರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಐವರು ಸಜೀವ ದಹನಗೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಸಂಭವಿಸಿದೆ.

ಲಖನೌದಿಂದ ಆಗ್ರಾಗೆ ತೆರಳುತ್ತಿದ್ದ ಕಾರು, ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ವೇಗವಾಗಿ ಚಲಿಸುತ್ತಿದ್ದ ಟ್ರಕ್ ಏಕಾಏಕಿ ರಾಂಗ್ ಟರ್ನ್ ತೆಗೆದುಕೊಂಡ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕಾರಿನ ಡೋರ್ ಲಾಕ್ ಆಗಿದ್ದ ಕಾರಣ ಹೊರಬರಲಾಗದೇ ಕಾರಿನಲ್ಲಿದ್ದ ಐವರು ಸಜೀವ ದಹನವಾಗಿದ್ದಾರೆ.

ಘಟನೆ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಿ ಐವರು ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

7ನೇ ದಿನಕ್ಕೆ ಕಾಲಿಟ್ಟ ಕಬ್ಬು ಹೋರಾಟಗಾರರ ಪ್ರತಿಭಟನೆ

Spread the loveಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ