Breaking News

ಭಾರತದಲ್ಲಿ ಯಾವುದೇ ಸಂದರ್ಭದಲ್ಲಿ ವ್ಯಾಕ್ಸಿನ್ ಹಂಚಿಕೆ ಆರಂಭ

Spread the love

ನವದೆಹಲಿ,ಡಿ.23-ದೇಶದಲ್ಲಿ ಕೊರೊನಾ ಲಸಿಕೆ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ಲಸಿಕೆ ಹಂಚಿಕೆ ಕಾರ್ಯ ಆರಂಭಗೊಳ್ಳುವ ಸಾಧ್ಯತೆಗಳಿವೆ. ಈಗಾಗಲೇ ದೆಹಲಿ ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಕ್ಕೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಯಾವುದೇ ಸಂದರ್ಭದಲ್ಲಿ ಲಸಿಕೆ ಆಸ್ಪತ್ರೆಗೆ ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ 90ಕ್ಕೂ ಹೆಚ್ಚು ಫ್ರೀಜರ್‍ಗಳು ಬಂದಿದ್ದು, ಕೆಲ ಫ್ರೀಜರ್‍ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ. ಆಸ್ಪತ್ರೆಯ ನೆಲಮಹಡಿ ಮತ್ತು ಮೊದಲ ಮಹಡಿಯಲ್ಲಿ ಸ್ಥಾಪಿಸಿರುವ 4,700 ಚದುರಡಿ ಸುತ್ತಳತೆಯ ಶೀತಾಗಾರದಲ್ಲಿ ಲಸಿಕೆ ಸಂಗ್ರಹಿಸಿಡುವ ಸಾಧ್ಯತೆಗಳಿವೆ ಎಂದು ರಾಜೀವ್‍ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮೂಲಗಳು ಹೇಳಿವೆ.ಯಾವುದೇ ಕ್ಷಣದಲ್ಲಿ ಲಸಿಕೆ ಆಗಮಿಸುವ ಸಾಧ್ಯತೆಗಳಿವೆ. ಹೀಗಾಗಿ ನಾವು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎನ್ನುತ್ತಾರೆ ಅಲ್ಲಿನ ಸಿಬ್ಬಂದಿಗಳು. ಮೂರು ಸಂಸ್ಥೆಗಳು ತಯಾರಿಸಿರುವ ಕೊರೊನಾ ಲಸಿಕೆಗಳನ್ನು ತುರ್ತು ಪರಿಸ್ಥಿತಿಯಲ್ಲಿ ಬಳಕೆ ಮಾಡಲು ಸರ್ಕಾರ ಈಗಾಗಲೇ ಸಮ್ಮತಿಸಿದೆ. ಇತರ ಕೆಲವು ಸಂಸ್ಥೆಗಳು ಲಸಿಕೆ ಕಂಡು ಹಿಡಿದಿದ್ದು, ಯಾವುದೇ ಸಂದರ್ಭದಲ್ಲಿ ಲಸಿಕೆ ಬಳಕೆಗೆ ಅನುಮತಿ ದೊರೆಯುವ ಸಾಧ್ಯತೆಗಳಿವೆ.


Spread the love

About Laxminews 24x7

Check Also

ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು,

Spread the loveಮೈಸೂರು: ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಸುರಕ್ಷತಾ ಕ್ರಮವಾಗಿ ಕಂಪನಿಯ ಟ್ರೈನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ