Breaking News

ವರ್ತೂರು ಕಿಡ್ನಾಪ್ ಕೇಸ್: ಇಬ್ಬರು ವಿದ್ಯಾರ್ಥಿಗಳು ಸೇರಿ 6 ಜನರ ಬಂಧನ

Spread the love

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಕಾರಿನಲ್ಲಿ ಅಪಹರಿಸಿ 30 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಬೆಂಗಳೂರಿನ ಆರು ಮಂದಿಯನ್ನು ಬಂಧಿಸುವಲ್ಲಿ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಕೇಂದ್ರ ವಲಯದ ಐಜಿಪಿ ಸೀಮಂತ್‍ಕುಮಾರ್ ಸಿಂಗ್ ತಿಳಿಸಿದರು.

 

ಮೂಲತಃ ತಮಿಳುನಾಡಿನ ಬೆಂಗಳೂರಿನ ವಿನಾಯಕನಗರದಲ್ಲಿ ವಾಸಿಸುತ್ತಿರುವ ಕವಿರಾಜ್ (43), ಬೆಳ್ಳಂದೂರು-ಸರ್ಜಾಪುರ ರಸ್ತೆಯ ಅರಳೂರು ನಿವಾಸಿ, ಬಿಕಾಂ ವಿದ್ಯಾರ್ಥಿಗಳಾದ ಲಿಖಿತ್ (20), ಉಲ್ಲಾಸ್ (21), ಪ್ರವೀಣ್ (20), ಎಚ್‍ಎಸ್‍ಆರ್ ಲೇಔಟ್‍ನ ಮನೋಜ್ (20), ಅಗದೂರಿನ ರಾಘವೇಂದ್ರ (34) ಬಂಧಿತ ಆರೋಪಿಗಳು ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ವಿವರಣೆ ನೀಡಿದರು.

 

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಇನೋವಾ ಕಾರು, ಎರಡು ಮಾರುತಿ ಸ್ವಿಫ್ಟ್ ಕಾರು, ಒಂದು ಮಾರುತಿ ರಿಟ್ಜ್ ಕಾರು, ಕೆಟಿಎಂ ಡ್ಯೂಕ್ ಬೈಕ್, ಮಾರಕಾಸ್ತ್ರಗಳು ಮತ್ತು 20.5 ಲಕ್ಷ ಹಣ ವಶಪಡಿಸಿಕೊಳ್ಳಲಾಗಿದೆ ಎಂದರು. ನ.25ರಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಅವರು ಚಾಲಕ ಸುನಿಲ್ ಎಂಬಾತನೊಂದಿಗೆ ಬೆಗ್ಲಿ ಹೊಸಹಳ್ಳಿ ಫಾರಂ ಹೌಸ್‍ನಿಂದ ಫಾರ್ಚೂನರ್ ಕಾರಿನಲ್ಲಿ ಬರುತ್ತಿದ್ದಾಗ ಎರಡು ಕಾರುಗಳಲ್ಲಿ ಬಂದ ಎಂಟು ಮಂದಿ ಅಪಹರಣಕಾರರು ಇವರ ಕಾರನ್ನು ಅಡ್ಡಗಟ್ಟಿ ಬಲವಂತವಾಗಿ ಅಪಹರಿಸಿ 30 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.


Spread the love

About Laxminews 24x7

Check Also

ಮಹೇಶ್ ಶೆಟ್ಟಿ ತಿಮರೋಡಿ ಕರೆತರುವಾಗ ಪೊಲೀಸ್​ ಕರ್ತವ್ಯಕ್ಕೆ ಅಡ್ಡಿ; ಮೂವರು ಬೆಂಗಲಿಗರ ಬಂಧನ

Spread the loveಉಡುಪಿ: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ವಾಹನಗಳನ್ನು ಹಿಂಬಾಲಿಸಿಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ