Breaking News

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪೊಲೀಸರ ವಶಕ್ಕೆ

Spread the love

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ, ಕಾಯ್ದೆ ರದ್ದು ಮಾಡುವಂತೆ ಕೋರಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ಭವನಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರೀಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೃಷಿ ಕಾಯ್ದೆ ರದ್ದು ಮಾಡಬೇಕು ಎಂದು ಆಗ್ರಹಿಸಿ 2 ಕೋಟಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಲು ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ತೆರಳಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿದ್ದ ಕಾಂಗ್ರೆಸ್ ನಿಯೋಗವನ್ನು ಪೊಲೀಸರು ಮಾರ್ಗ ಮಧ್ಯೆಯೇ ತಡೆದಿದ್ದಾರೆ. ಈ ವೇಳೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ವಾರವೂ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶ ಮಾಡಬೇಕು ಹಾಗೂ ಕಾಯ್ದೆ ರದ್ದು ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ