Breaking News

ಬೆಳಗಾವಿಯಲ್ಲಿ ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನಾಚರಣೆ, ಕಿಸಾನ್ ಸಮ್ಮಾನ ಕಾರ್ಯಕ್ರಮ

Spread the love

 

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಅಂಗವಾಗಿ ಬೆಳಗಾವಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬೆಳಗಾವಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ, ನಗರ, ಗ್ರಾಮೀಣ ಮಂಡಳ ಘಟಕಗಳ ಆಶ್ರಯದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಅಂಗವಾಗಿ ಬೆಳಗಾವಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವನಾಚೆ ಮಾತನಾಡಿ, ಭಾರತ ಎಂದರೆ ಹಳ್ಳಿಗಳ ದೇಶ. ರೈತರು ಈ ದೇಶದ ಜೀವನಾಡಿ. ಭಾರತ ವಿಶ್ವಗುರುವಾಗುವ ಅರ್ಹತೆ ಪಡೆದಿರುವುದು ರೈತರಿಂದ. ರೈತರು ದೇಶದ ಆರ್ಥಿಕತೆಯ ಬೆನ್ನೆಲುಬು ಅಷ್ಟೇ ಅಲ್ಲ, ದೇಶದ ಸಮೃದ್ಧ ಬದುಕಿಗೆ ಆಧಾರವೂ ಹೌದು. ಅವರಿಲ್ಲದೇ ಭಾರತ ವಿಶ್ವಗುರುವಿನ ಸ್ಥಾನಕ್ಕೆ ಅರ್ಹತೆ ಗಳಿಸುವುದು ಸಾಧ್ಯವೇ ಇಲ್ಲ. ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು, ಆರ್ಥಿಕ ಚೇತರಿಕೆಗೆ ಅವಕಾಶ ನೀಡಲು ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಲು ಹೊರಟಿದೆ. ರೈತರು ತಾವು ಬೆಳೆದ ಉತ್ಪನ್ನಗಳನ್ನು ಯೋಗ್ಯ ಬೆಲೆಗೆ ಎಲ್ಲಿ ಬೇಕಾದರೂ ಮಾರಬಹುದು. ಹಾಗೆಂದು ಎಪಿಎಂಸಿ ಮುಚ್ಚುವ ಯಾವ ಉದ್ದೇಶವೂ ಸರ್ಕಾರಕ್ಕೆ ಇಲ್ಲ. ರೈತರನ್ನು ಆರ್ಥಿಕವಾಗಿ ಬಲಾಢ್ಯಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

ಈ ವೇಳೆ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕರಾದ ಅನಿಲ ಬೆನಕೆ, ಅಭಯ ಪಾಟೀಲ, ಬಿಜೆಪಿ ನಗರ ಅಧ್ಯಕ್ಷ ಶಶಿಕಾಂತ ಪಾಟೀಲ, ಬಿಜೆಪಿ ಉತ್ತರ ಮಂಡಳಿ ಅಧ್ಯಕ್ಷ ಪಾಂಡುರಂಗ ಧಾಮಣೇಕರ, ಮಹಾಂತೇಶ ಹಿರೇಮಠ, ಸಂಜಯ ಜಿನಗೌಡ, ಬಸನಗೌಡ ಪಾಟೀಲ, ಸತೀಶ ಶೇಜವಾಡಕರ, ಬಾಹುಬಲಿ ದೊಡ್ಡಣ್ಣವರ, ಗಜು ನಂದಗಡಕರ, ಶರದ್ ಪಾಟೀಲ ಮತ್ತಿತರರು ಇದ್ದರು.


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ