Breaking News
Home / Uncategorized / ಬಿಜೆಪಿಯವರು 7 ವರ್ಷದಲ್ಲೇ ಮಾರಿದ್ರು: ಶಾಸಕ ಸತೀಶ ಜಾರಕಿಹೊಳಿ ವಾಗ್ದಾಳಿ ಕಾಂಗ್ರೆಸ್ ಏನು ಮಾಡದಿದ್ರೆ ಸಂಸ್ಥೆಗಳನ್ನು ಹೇಗೆ ಮಾರಾಟ ಮಾಡುತಿದ್ರು?

ಬಿಜೆಪಿಯವರು 7 ವರ್ಷದಲ್ಲೇ ಮಾರಿದ್ರು: ಶಾಸಕ ಸತೀಶ ಜಾರಕಿಹೊಳಿ ವಾಗ್ದಾಳಿ ಕಾಂಗ್ರೆಸ್ ಏನು ಮಾಡದಿದ್ರೆ ಸಂಸ್ಥೆಗಳನ್ನು ಹೇಗೆ ಮಾರಾಟ ಮಾಡುತಿದ್ರು?

Spread the love

ಗೋಕಾಕ: ಕಾಂಗ್ರೆಸ್ ಪಕ್ಷ 70 ವರ್ಷಗಳ ಕಾಲ ನಿರಂತರ ಶ್ರಮಪಟ್ಟು ಅಭಿವೃದ್ದಿಗೊಳಿಸಿದ ದೇಶವನ್ನು ಬಿಜೆಪಿಯವರು ಕೇವಲ 7 ವರ್ಷದಲ್ಲಿ ಮಾರಾಟ ಮಾಡಿದ್ದಾರೆ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು.

ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಸೋಮವಾರ ನಡೆದ ಕಾಂಗ್ರೆಸ್ 136 ವರ್ಷದ ಸಂಸ್ಥಾಪನಾ ದಿನಾಚರಣೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಪೆಟ್ರೋಲಿಯಂ, ಬಿಎಸ್ಎನ್ ಎಲ್ ಎಲ್ಲವನ್ನು ಕಾಂಗ್ರೆಸ್ ನವರು 70ವರ್ಷಗಳ ಕಾಲ ಕಟ್ಟಿ ಬೆಳಸಿದ ಸಂಸ್ಥೆಗಳು, ಅವುಗಳನ್ನು ಇಂದು ಬಿಜೆಪಿಯವರು ಮಾರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ 70 ವರ್ಷದಲ್ಲಿ ಏನು ಮಾಡಿಲ್ಲ ಅಂತಾ ಉದ್ದುದ್ದ ಭಾಷಣ ಬಿಗಿಯುತ್ತಾರೆ. ನಾವು ಏನನ್ನು ಅಭಿವೃದ್ದಿ ಮಾಡದೆ ಇದ್ರೆ ಇವರು ವಿಮಾನ ನಿಲ್ದಾಣ, ರೈಲ್ವೆ ಹೀಗೆ ಎಲ್ಲವನ್ನು ಮಾರಾಟ ಹೇಗೆ ಮಾಡುತ್ತಿದ್ರು ಎಂದು ಪ್ರಶ್ನಿಸಿದ್ರು.

ಕಾಂಗ್ರೆಸ್ ನ ಆಡಳಿತ ಅವಧಿ ಸುವರ್ಣ ಯುಗವಾಗಿತ್ತು. ಇವರು(ಬಿಜೆಪಿ)ಯವರು ಒಂದೊಂದೆ ಕ್ಷೇತ್ರವನ್ನು ಟಾರ್ಗೆಟ್ ಮಾಡಿಕೊಂಡು ಉದ್ಯಮಿಗಳ ಪಾಲು ಮಾಡುತ್ತಿದ್ದಾರೆ. ಎಲ್ಲವನ್ನು ಮಾರಾಟ ಮಾಡಿ ನಾವು ದೇಶಭಕ್ತರು ಎನ್ನು ವುದನ್ನು ಮಾತ್ರ ಬಿಡುತ್ತಿಲ್ಲ. ಪ್ರಧಾನಿ ಮೋದಿ ರಾತ್ರಿ 8 ಗಂಟೆಗೆ ಟಿವಿಯಲ್ಲಿ ಬರ್ತಾರೆ ಅಂದ್ರೆ ಏನು ಕಂಟಕ ಕಾದಿದೆ ಅಂತಲೇ ಅರ್ಥ. ಸದ್ಯ ರೈತರು ಅವರ ಮುಂದಿನ ಗುರಿಯಾಗಿದ್ದಾರೆ . ತಮ್ಮ ಹಕ್ಕುಗಳಿಗಾಗಿ ಬೀದಿಗಳಿದಿರುವ ಅನ್ನದಾತರನ್ನು ದೇಶದ್ರೋಹಿ ಪಟ್ಟ ಕಟ್ಟುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷ ಸಂಘಟನೆ ಒತ್ತು ನೀಡಿ:

ಫೆಬ್ರುವರಿ ತಿಂಗಳಿನಲ್ಲಿ ಬೆಳಗಾವಿ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಬೂತ ಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು. ಭಿನ್ನಾಭಿಪ್ರಯಾವನ್ನು ಬದಿಗೊತ್ತಿ ಪಕ್ಷ ಅಧಿಕಾರಕ್ಕೆ ತರಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಯುವ ನಾಯಕರಾದ ಪ್ರಿಯಂಕಾ ಜಾರಕಿಹೊಳಿ, ರಾಹುಲ್ ಜಾರಕಿಹೊಳಿ, ಪ್ರಕಾಶ ಡಾಂಗೆ, ವಿವೇಕ ಜತ್ತಿ, ಇಮ್ರಾಸ ತಪ್ಕಿರ, ಶಂಕರ ಗಿಡನ್ನವರ, ಬಸನಗೌಡ ಹೊಲೆಯಾಚೆ, ಮಂಜುಳಾ ರಾಮಗಾಣಟ್ಟಿ, ನಿಹಾಳ ಹುಳಿಕಟ್ಟಿ, ಉದಯ ತಳವಾರ, ರಿಯಾಜ ಚೌಗಲಾ , ಪಾಂಡು‌ ಮನ್ನಿಕೆರಿ‌, ಪರಸಪ್ಪ ಚುನ್ನಣ್ಣವರ ಕಾರ್ಯಕರ್ತರು ಇದ್ದರು.


Spread the love

About Laxminews 24x7

Check Also

ಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್

Spread the loveಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬೆಂಗಳೂರು, ಮೇ. 03 : ಬೆಂಗಳೂರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ