Breaking News

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವವರಿಗೆ ಕಠಿಣ ಸಂದೇಶ ರವಾನಿಸಿದ ನ್ಯಾಯಾಲಯ

Spread the love

ತುಮಕೂರು: ಜಿಲ್ಲೆಯಲ್ಲಿ ಪೋಕ್ಸೋ ಕಾಯ್ದೆ -2012 ರಡಿ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 11 ಪ್ರಕರಣಗಳಿಗೆ ಸಂಬಂಧಿಸಿದಂತೆ 2019-20 ಹಾಗೂ 2020 21 ನೇ ಸಾಲಿನಲ್ಲಿ 18 ಆರೋಪಿಗಳಿಗೆ ಶಿಕ್ಷೆ ನೀಡಿ ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ . ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಗಳಲ್ಲಿ ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಒಂದು ವರ್ಷದಿಂದ ಜೀವಾವಧಿಯವರೆಗೂ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಲು ಪೋಕ್ಸೋ ಕಾಯ್ದೆ ಸಹಕಾರಿಯಾಗಿದೆ ಎಂದರು.

ಈ ಕಾಯ್ದೆಯಡಿ 18 ವರ್ಷದೊಳಗಿನ ಗಂಡು ಮತ್ತು ಹೆಣ್ಣು ಮಕ್ಕಳು ಲೈಂಗಿಕ ದೌರ್ಜನ್ಯಕ್ಕೊಳಗಾದಾಗ ದೂರನ್ನು ದಾಖಲಿಸಲು ಅವಕಾಶವಿರುತ್ತದೆ . ಇಂತಹ ದೂರುಗಳ ವಿಚಾರಣೆಗಾಗಿ ರಾಜ್ಯದಲ್ಲಿ “ ಮಕ್ಕಳ ಸ್ನೇಹಿ ವಿಶೇಷ ನ್ಯಾಯಾಲಯ” ಸ್ಥಾಪಿಸಲಾಗಿದೆ. ತುಮಕೂರಿನಲ್ಲಿಯೂ ಸದರಿ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿದೆ.ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಮಕ್ಕಳ ಸ್ನೇಹಿ ವಿಶೇಷ ನ್ಯಾಯಾಲಯವನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್ ಎಂದು ಇತ್ತೀಚೆಗೆ ಪರಿವರ್ತಿಸಲಾಗಿದೆ. ಈ ಫಾಸ್ಟ್ ಟ್ರ್ಯಾಕ್ ಕೋರ್ಟ್​ನಲ್ಲಿ 2019-20 ಹಾಗೂ 2020-21ನೇ ಸಾಲಿನಲ್ಲಿ ಈವರೆಗೆ ಶಿಕ್ಷೆ ಪ್ರಕಟಿಸಿದ 11 ಪ್ರಕರಣಗಳಲ್ಲಿ ಒಟ್ಟು 18 ಆರೋಪಿಗಳಿಗೆ ಶಿಕ್ಷೆ ಮತ್ತು ದಂಡವನ್ನು ವಿಧಿಸಲಾಗಿದೆ.

ಈ ಪೈಕಿ ಇಬ್ಬರು ಆರೋಪಿಗಳಿಗೆ 20 ವರ್ಷ ಶಿಕ್ಷೆ ಹಾಗೂ ತಲಾ 5,000 ರೂ. ದಂಡ , ಒಬ್ಬ ಆರೋಪಿಗೆ 15 ವರ್ಷ ಶಿಕ್ಷೆ ಹಾಗೂ 50,000 ರೂ. ದಂಡ, ಇಬ್ಬರು ಆರೋಪಿಗಳಿಗೆ 12 ವರ್ಷ ಕಠಿಣ ಶಿಕ್ಷೆ ಹಾಗೂ ತಲಾ 5,000 ರೂ. ದಂಡ , 3 ಜನ ಆರೋಪಿಗಳಿಗೆ 5 ವರ್ಷ ಶಿಕ್ಷೆ ಹಾಗೂ ತಲಾ 20,000 ರೂ. ದಂಡ ವಿಧಿಸಲಾಗಿದೆ. 5 ಜನ ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ ಹಾಗೂ ತಲಾ 5,000 ರೂ. ದಂಡ, ಇಬ್ಬರು ಆರೋಪಿಗಳಿಗೆ 3 ವರ್ಷ ಕಠಿಣ ಶಿಕ್ಷೆ ಹಾಗೂ ತಲಾ 5,000 ರೂ. ದಂಡ, ಒಬ್ಬ ಆರೋಪಿಗೆ 3 ವರ್ಷ ಶಿಕ್ಷೆ ಹಾಗೂ 20,000 ರೂ . ದಂಡ, ಒಬ್ಬ ಆರೋಪಿಗೆ 2 ವರ್ಷ ಶಿಕ್ಷೆ ಹಾಗೂ 50,000 ರೂ. ದಂಡ, ಒಬ್ಬ ಆರೋಪಿಗೆ 3 ವರ್ಷ ಕಠಿಣ ಶಿಕ್ಷೆ ಹಾಗೂ 25,000 ರೂ.ಗಳ ದಂಡವನ್ನು ವಿಧಿಸಲಾಗಿದೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ