Breaking News

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ

Spread the love

ಗೋಕಾಕ: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ. 1 ರಿಂದ 5ರವರೆಗೆ ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ದಿ. 1 ರಂದು ಮಧ್ಯಾಹ್ನ 2.30 ಗಂಟೆಗೆ ಗುವಾಹಟಿಯಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು. ದಿ. 2 ರಂದು ಮುಂಜಾನೆ 11.15 ಗಂಟೆಗೆ ತಾಲೂಕಿನ ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡುವರು. ನಂತರ ಮಧ್ಯಾಹ್ನ 1 ಗಂಟೆಗೆ ಅಲ್ಲಿಂದ ಬೆಳಗಾವಿಗೆ ತೆರಳಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಹಾಗೂ ಕಾರ್ಯಕರ್ತರ ಕುಂದು ಕೊರತೆಗಳನ್ನು ವಿಚಾರಿಸುವರು. ಸಂಜೆ ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು.
ದಿ. 3 ರಂದು ಮುಂಜಾನೆ 11 ಗಂಟೆಹೆ ನಗರಸಭೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡುವರು. ಗೋಕಾಕದಲ್ಲಿ ವಾಸ್ತವ್ಯ. ದಿ. 4 ರಂದು ಮುಂಜಾನೆ 8 ಗಂಟೆಗೆ ಗೋಕಾಕದಿಂದ ರಸ್ತೆ ಸಂಚಾರದ ಮೂಲಕ ಮಹಾರಾಷ್ಟ್ರದ ಪುಣೆಯಲ್ಲಿ ಜರುಗುವ ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಲ್ಲಿಯೇ ವಾಸ್ತವ್ಯ ಮಾಡುವರು. ದಿ. 5 ರಂದು ಪುಣೆಯಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು ಎಂದು ಸಚಿವರ ಆಪ್ತಕಾರ್ಯದರ್ಶಿ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ