Breaking News

ದೇಶಾದ್ಯಂತ ಕೋವಿಡ್-19 ಸೋಂಕಿನ ಚೇತರಿಕೆ ಪ್ರಮಾಣ ಶೇಕಡ 98.83ಕ್ಕೆ ಏರಿದೆ.

Spread the love

ನವದೆಹಲಿ: ದೇಶಾದ್ಯಂತ ಕೋವಿಡ್-19 ಸೋಂಕಿನ ಚೇತರಿಕೆ ಪ್ರಮಾಣ ಶೇಕಡ 98.83ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 23 ಸಾವಿರಕ್ಕಿಂತ ಅಧಿಕ ಸೋಂಕಿತರು ಗುಣಮುಖರಾಗಿ, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ ದೇಶದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 98 ಲಕ್ಷದ 83 ಸಾವಿರಕ್ಕೆ ಏರಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 23,181 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯೊಂಡಿದ್ದು, ಇದರೊಂದಿಗೆ ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 2 ಲಕ್ಷದ 54 ಸಾವಿರಕ್ಕೆ ಇಳಿಕೆ ಕಂಡಿದೆ.

ಕಳೆದ 179 ದಿನಗಳಿಂದಲೂ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ ಕಾಣುತ್ತಿರುವುದು ಮಹತ್ವದ ಬೆಳವಣಿಗೆಯಾಗಿದೆ. ಪ್ರಸ್ತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಶೇಕಡಾವಾರು 2.47ರಷ್ಟಿದ್ದು, ಕಳೆದ 7 ದಿನಗಳಿಂದ ದೇಶದಲ್ಲಿ 300ಕ್ಕಿಂತಲೂ ಕಡಿಮೆ ಸಾವು ವರದಿಯಾಗುತ್ತಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಐಸಿಎಂಆರ್‍ ನೀಡಿರುವ ವರದಿಯಂತೆ ಕಳೆದ 24 ತಾಸಿನಲ್ಲಿ 10 ಲಕ್ಷ 62 ಸಾವಿರಕ್ಕೂ ಹೆಚ್ಚು ಕೋವಿಡ್ ಮಾದರಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದರೊಂದಿಗೆ ಈವರೆಗೆ ನಡೆಸಲಾದ ಒಟ್ಟು ಪರೀಕ್ಷೆಗಳ ಸಂಖ್ಯೆ 17,31,11,694 ಕೋಟಿಗೆ ಏರಿಕೆಯಾಗಿದೆ.


Spread the love

About Laxminews 24x7

Check Also

ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಲ್ಲ- ನೈಸ್‌ಗೆ ಸುಪ್ರೀಂನಲ್ಲಿ ಹಿನ್ನಡೆ

Spread the loveನವದೆಹಲಿ: ರಾಜ್ಯದಲ್ಲಿ ನೈಸ್ ರಸ್ತೆ ಅಕ್ರಮಗಳ ವಿಚಾರ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸುಪ್ರೀಂ ಕೋರ್ಟ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ