Breaking News

ಬ್ಯಾಡಗಿ ಮೆಣಸಿನಕಾಯಿಯನ್ನು ರಾಜಕೀಯ ದ್ವೇಷದ ಹಿನ್ನೆಲೆ ಜಮೀನಿನಲ್ಲೇ ಕಿಡಿಗೇಡಿಗಳು ನಾಶ ಮಾಡಿದ್ದಾರೆ.

Spread the love

ರಾಯಚೂರು: ಕೊಯ್ಲಿಗೆ ಬಂದಿದ್ದ ಬ್ಯಾಡಗಿ ಮೆಣಸಿನಕಾಯಿಯನ್ನು ರಾಜಕೀಯ ದ್ವೇಷದ ಹಿನ್ನೆಲೆ ಜಮೀನಿನಲ್ಲೇ ಕಿಡಿಗೇಡಿಗಳು ನಾಶ ಮಾಡಿದ್ದಾರೆ.

ದೇವದುರ್ಗ ತಾಲೂಕಿನ ಹೊನ್ನಕಾಟಮಳ್ಳಿ ಗ್ರಾಮದಲ್ಲಿ ರೈತ ಕಾಸಿಂಸಾಬ್ ಪಿಲಿಗುಂದ ಎಂಬುವವರು ಎರಡು ಎಕರೆ ಜಮೀನಿನಲ್ಲಿ ಮೆಣಸಿನಕಾಯಿ ಬೆಳೆದಿದ್ದರು. ಮೆಣಸಿನಕಾಯಿಗೆ ಸದ್ಯ ಮಾರುಕಟ್ಟೆಯಲ್ಲಿ ಉತ್ತಮ ದರ ಇದೆ. ಲಾಭದ ನಿರೀಕ್ಷೆಯಲ್ಲಿ ರಾತ್ರಿ ಮಲಗಿದ್ದ ರೈತ ಬೆಳಗ್ಗೆ ಎದ್ದೇಳುವಷ್ಟರಲ್ಲಿ ಬೆಳೆ ನೆಲಸಮವಾಗಿತ್ತು! ಇಷ್ಟೆಲ್ಲ ಅವಾಂತರಕ್ಕೆ ಕಾರಣ ಗ್ರಾಪಂ ಚುನಾವಣೆ.

ಕಾಸಿಂಸಾಬ್ ಅವರ ಮಾವ ಬಾಬು ಸೈಯದ್ ಖಾನ್ ಎಂಬುವವರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಮಾವನ ಪರ ಖಾಸಿಂಸಾಬ್ ಚುನಾವಣೆ ಪ್ರಚಾರ ನಡೆಸಿದ್ದರು. ಬುಧವಾರ ಫಲಿತಾಂಶ ಪ್ರಕಟವಾಗಿದ್ದು, ಚುನಾವಣೆಯಲ್ಲಿ ಬಾಬು ಸೈಯದ್ ಖಾನ್ ಗೆಲುವು ಸಾಧಿಸಿದ್ದಾರೆ. ಇದಾದ ಮರುದಿನವೇ ಅಂದರೆ ಗುರುವಾರ ರಾತ್ರಿ ದುಷ್ಕರ್ಮಿಗಳು ಮೆಣಸಿನಕಾಯಿ ಬೆಳೆ ನಾಶ ಮಾಡಿದ್ದಾರೆ. 

5 ಲಕ್ಷ ರೂ. ವೆಚ್ಚದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆದಿದ್ದೆ. ರಾಜಕೀಯ ದ್ವೇಷಕ್ಕೆ ಕಿಡಿಗೇಡಿಗಳು ಬೆಳೆಯನ್ನು ನಾಶ ಮಾಡಿದ್ದು, ಸುಮಾರು 12 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಸಂತ್ರಸ್ತ ರೈತ ಅಳಲು ತೋಡಿಕೊಂಡಿದ್ದಾರೆ.

ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳೆ ನಾಶವಾದ ಸ್ಥಳಕ್ಕೆ ಪೊಲೀಸರು ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

 


Spread the love

About Laxminews 24x7

Check Also

ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಮಧ್ಯರಾತ್ರಿ ಕಳ್ಳತನ

Spread the love ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಮಧ್ಯರಾತ್ರಿ ಕಳ್ಳತನ ನಡೆದ ಘಟನೆ ಭಾನುವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ