Breaking News
Home / ಜಿಲ್ಲೆ / ಕ್ವಾರಂಟೈನ್ ಇರುವ ವ್ಯಕ್ತಿಗಳು ಸಾರ್ವಜನಿಕ ಸ್ಥಳದಲ್ಲಿ ಕಂಡು ಬಂದರೆ ತಕ್ಷಣ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು

ಕ್ವಾರಂಟೈನ್ ಇರುವ ವ್ಯಕ್ತಿಗಳು ಸಾರ್ವಜನಿಕ ಸ್ಥಳದಲ್ಲಿ ಕಂಡು ಬಂದರೆ ತಕ್ಷಣ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು

Spread the love

ಬೆಳಗಾವಿ: ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ಇರುವ ವ್ಯಕ್ತಿಗಳು ಸಾರ್ವಜನಿಕ ಸ್ಥಳದಲ್ಲಿ ಕಂಡು ಬಂದರೆ ತಕ್ಷಣ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲೆಯ ಎಲ್ಲ ತಾಲ್ಲೂಕಗಳ ಅಧಿಕಾರಿಗಳ ಜತೆ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದರು.

ಕ್ವಾರಂಟೈನ್ ಒಳಪಟ್ಟಿರುವ ವ್ಯಕ್ತಿಗಳು ಸಾರ್ವಜನಿಕ ಪ್ರದೇಶಗಳಲ್ಲಿ ಸಂಚರಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಅದೇ ರೀತಿ ಸ್ಟ್ಯಾಂಪಿಂಗ್ ಎಲ್ಲರಿಗೂ ಆಗಿಲ್ಲ ಎಂಬ ದೂರುಗಳಿದ್ದು, ಇಂದು ಸಂಜೆಯೊಳಗೆ ಕ್ವಾರಂಟೈನ್ ಇರುವರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೂ ಕಡ್ಡಾಯವಾಗಿ ಸ್ಟ್ಯಾಂಪಿಂಗ್ ಮಾಡಬೇಕು ಎಂದು ಸರ್ಕಾರ ಸೂಚಿಸಿದೆ. ಆ ಪ್ರಕಾರ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಕ್ವಾರಂಟೈನ್ ಇರುವ ವ್ಯಕ್ತಿಗಳ ಮನೆಯ ಮೇಲೆ‌ ನಿಗದಿತ ಮಾದರಿಯ ಎಚ್ಚರಿಕೆಯ ಪತ್ರವನ್ನು ಕೂಡ ಅವರ ಮನೆಯ‌ ಮೇಲೆ ಅಂಟಿಸಬೇಕು. ಆ ವ್ಯಕ್ತಿಯ ಮನೆಗೆ‌ ಪೊಲೀಸ್ ಬೀಟ್ ಸಿಬ್ಬಂದಿ ಕಡ್ಡಾಯವಾಗಿ ದಿನಕ್ಕೆ ಎರಡು ಬಾರಿ ಭೇಟಿ ನೀಡಿ ಪರಿಶೀಲಿಸಬೇಕು. ಅಕ್ಕಪಕ್ಕದ ಮನೆಯವರ ದೂರವಾಣಿ ಸಂಖ್ಯೆ ಪಡೆದುಕೊಂಡು ನಿಗಾ ವಹಿಸಬೇಕು.
ತಾಲ್ಲೂಕು, ಗ್ರಾಮ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಈ ರೀತಿಯ ಕಾರ್ಯವಿಧಾನ ಪಾಲಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಲಾಕ್ ಡೌನ್ ಹಾಗೂ ಕ್ವಾರಂಟೈನ್ ಗೆ ಸಂಬಂಧಿಸಿದಂತೆ ಸರ್ಕಾರ ನೀಡಿರುವ ಆದೇಶವನ್ನು ಚಾಚೂತಪ್ಪದೇ ಪಾಲಿಸಬೇಕು. 144 ಕಲಂ ಉಲ್ಲಂಘಿಸುವ ಜನರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಬೇಕು ಎಂದು ಸೂಚನೆ‌ ನೀಡಿದರು.

ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಬೇಕು. ಸಾಮೂಹಿಕ ಪ್ರಾರ್ಥನೆ, ಉತ್ಸವಗಳಿಗೆ ನಿರ್ಬಂಧಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. , ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ