ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹೀಗಾಗಿ ಅದರ ಬಗ್ಗೆ ಚರ್ಚೆ ಬೇಡ. ಅವಧಿ ಮುಗಿಯುವವರೆಗೂ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸಚಿವ ಜಗದೀಶ ಶೆಟ್ಟರ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಅವರು ಕೇಂದ್ರದ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ. ಆ ಕುರಿತು ಅವರೇ ಅಂತಿಮ ನಿರ್ಧಾರ ಕೈಗೊಳ್ಳುವರು ಎಂದರು.

ಶಿವಮೊಗ್ಗದಲ್ಲಿ ನಡೆಯಲಿರುವ ಕೋರ್ ಕಮೀಟಿಗೆ ಹಾಜರಾಗಲಿದ್ದೇನೆ. ಪ್ರತಿ ತಿಂಗಳು ಪಕ್ಷದ ಕಾರ್ಯಕಾರಿಣಿ ನಡೆಯುತ್ತದೆ. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದವರಲ್ಲಿ ಶೇ. 60ಕ್ಕಿಂತ ಹೆಚ್ಚು ಬಿಜೆಪಿ ಬೆಂಬಲಿತರಾಗಿದ್ದಾರೆ. ಬೇರುಮಟ್ಟದಲ್ಲಿ ಬಿಜೆಪಿ ಬೆಳೆದಿದೆ ಎಂಬುದಕ್ಕೆ ಗ್ರಾ.ಪಂ ಚುನಾವಣೆ ಫಲಿತಾಂಶ ಉದಾಹರಣೆ ಎಂದರು.
Laxmi News 24×7