Breaking News

4 ಕೆಜಿ ಚಿನ್ನವನ್ನು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Spread the love

ಬೆಂಗಳೂರು ): 2.25 ಕೋಟಿ ರೂ. ಮೊತ್ತದ 4 ಕೆಜಿ ಚಿನ್ನವನ್ನು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ, ದೆಹಲಿ, ಹರಿಯಾಣಗಳಿಂದ ಕರ್ನಾಟಕಕ್ಕೆ ಬಂದು ಸರಣಿ ಕಳ್ಳತನ ಮಾಡುತ್ತಿದ್ದ ಕಳ್ಳರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ. ಬಂಧಿತ ಆರೋಪಿಗಳಿಂದ ಸಿಸಿಬಿ ಪೊಲೀಸರು 4 ಕೆ.ಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ಫಯೂಮ್ ಹಾಗೂ ಮುರಸಲೀಂ ಮೊಹಮದ್ ಬಂಧಿತ ಆರೋಪಿಗಳಾಗಿದ್ದಾರೆ. ಉತ್ತರ ಪ್ರದೇಶ, ದೆಹಲಿ, ಹರಿಯಾಣ ರಾಜ್ಯಗಳಿಂದ ನಗರಕ್ಕೆ ಬಂದು ಕಳ್ಳತನ ಮಾಡುತ್ತಿದ್ದ ಈ ಆರೋಪಿಗಳಿಂದ 35 ಕೇಸ್​ಗಳು ಪತ್ತೆಯಾಗಿವೆ. ಇವರಿಂದ 2.25 ಕೋಟಿ ಮೊತ್ತದ ಚಿನ್ನ ಜಪ್ತಿ ಮಾಡಲಾಗಿದೆ. ಫಯೂಮ್ ಎಂಬಾತ ಎಟಿಎಂ ರಾಬರಿ ಸಹ ಮಾಡುತ್ತಿದ್ದ ಎಂಬುದು ಬೆಳಕಿಗೆ ಬಂದಿದೆ. ಇದರಿಂದಲೇ ಆತ ಎಟಿಎಂ ಫಯೂಮ್ ಎಂದೇ ಪ್ರಸಿದ್ಧಿ ಪಡೆದಿದ್ದ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ