Breaking News

ರೈತರು ಪ್ರತಿಭಟನೆ ನಡೆಸುತ್ತಿದ್ದ ಮೈದಾನಕ್ಕೆ ನುಗ್ಗಿದ ಮಳೆ ನೀರು

Spread the love

ನವದೆಹಲಿ,ಜ.3-ವಿವಾದಿತ ಮೂರು ಕೃಷಿ ನೀತಿಗಳನ್ನು ವಿರೋಸಿ ಕಳೆದ ತಿಂಗಳಿನಿಂದ ನಿರಂತರ ಪ್ರತಿಭಟನೆ ನಡೆಸುತ್ತಿರುವ ರೈತರು ತಂಗಿರುವ ಬುರಾರಿ ಮೈದಾನಕ್ಕೆ ಮಳೆನೀರು ನುಗ್ಗಿದ್ದು, ಸಂಕಷ್ಟ ಎದುರಾಗಿದೆ.

ರೈತರು ಕನಿಷ್ಠ ಬೆಂಬಲ ಬೆಲೆಯನ್ನು ಖಾತ್ರಿಪಡಿಸಬೇಕು, ಕೃಷಿ ವಿರೋಯಾದ ಮೂರು ತಿದ್ದುಪಡಿ ಮಸೂದೆಗಳನ್ನು ಹಿಂಪಡೆಯಬೇಕೆಂದು ಕಳೆದ ನವೆಂಬರ್‍ನಿಂದಲೂ ದೆಹಲಿಯನ್ನು ಸಂಪರ್ಕಿಸುವ ಹೆದ್ದಾರಿಗಳನ್ನು ತಡೆದು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ಪ್ರತಿಭಟನೆಯನ್ನು ಅಂತ್ಯಗೊಳಿಸಲು ಕೇಂದ್ರ ಸರ್ಕಾರ ನಡೆಸಿದ 6 ಸುತ್ತಿನ ಮಾತುಕತೆಗಳು ವಿಫಲವಾಗಿವೆ. ಪಂಜಾಬ್, ಹರಿಯಾಣ ಗಡಿಭಾಗದ ಹೆದ್ದಾರಿಗಳು ಮುಚ್ಚಲ್ಪಟ್ಟಿವೆ. ಇತ್ತೀಚೆಗೆ ಉತ್ತರಪ್ರದೇಶವನ್ನು ಸಂಪರ್ಕಿಸುವ ರಸ್ತೆಗಳಲ್ಲೂ ಪ್ರತಿಭಟನೆನಡೆಸಲಾಗಿತ್ತು.

ದೆಹಲಿಯ ಉಷ್ಣಾಂಶ ಅತ್ಯಂತ ಕನಿಷ್ಠ ಪ್ರಮಾಣಕ್ಕೆ ಕುಸಿದಿದ್ದು, ಕನಿಷ್ಠ 1 ಡಿಗ್ರಿ ಸೆಲ್ಸಿಯಸ್‍ಗೆ ಇಳಿದಿದೆ. ಮನೆಯ ಒಳಗೆ ಇರುವವರೇ ಈ ಶೀತ ವಾತಾವರಣದಲ್ಲಿ ನಲುಗಿ ಹೋಗುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ರಸ್ತೆಬದಿಯಲ್ಲಿ ನೆಲೆಯೂರಿರುವ ರೈತರ ಪರಿಸ್ಥಿತಿ ಚಿಂತಾಜನಕವಾಗಿದೆ.

ಈ ನಡುವೆ ದೆಹಲಿಯಲ್ಲಿ ಮಳೆ ಸುರಿದಿದ್ದು, ಮಳೆ ನೀರು ರೈತರು ಬೀಡು ಬಿಟ್ಟಿರುವ ಬುರಾರಿ ಮೈದಾನಕ್ಕೆ ನುಗ್ಗಿದೆ. ಇಡೀ ರಾತ್ರಿ ರೈತರು ನಿದ್ದೆ ಇಲ್ಲದೆ ಕಳೆದಿದ್ದಾರೆ.

ಮೈದಾನಕ್ಕೆ ನುಗ್ಗಿದ ನೀರನ್ನು ಹೊರಗೆ ಹಾಕಲು ಸೆನಿಕೆ, ಗುದ್ದಲಿ ಹಿಡಿದು ಕೆಲಸ ಮಾಡಿದ್ದಾರೆ. ಸರ್ಕಾರ ನಮ್ಮ ಅಳಲನ್ನು ಕೇಳುತ್ತಿಲ್ಲ. ಹಾಗಾಗಿ ನಮ್ಮ ಪ್ರತಿಭಟನೆ ಮುಂದುವರೆಯುತ್ತದೆ ಎಂದು ಸಂಕಷ್ಟದ ನಡುವೆಯೂ ಸಹ ರೈತರು ಘೋಷಣೆ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ