Breaking News

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಸುಗ್ರೀವಾಜ್ಞೆ ಮೂಲಕ ಜಾರಿ : ರಾಜ್ಯ ಬಿಜೆಪಿ ಘಟಕದಿಂದ ಮಾಹಿತಿ

Spread the love

ಬೆಂಗಳೂರು : ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ಕಾಯ್ದೆಯನ್ನು ಕೊನೆಗೂ ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದ್ದು, ಮಸೂದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿದೆ ಎಂಬ ಮಾಹಿತಿಗಳು ಲಭ್ಯವಾಗಿದೆ.

ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಬಿಜೆಪಿ ಘಟಕ, ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಗೋಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರಿವಾಜ್ಞೆಯ ಮೂಲಕ ಜಾರಿಗೊಳಿಸಿದ್ದಾರೆ. ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನುಗಳನ್ನು ಕೂಡ ಜಾರಿಗೆ ತರಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ಈ ಹಿಂದಿನ ಕಾರ್ಯಕಾರಿಣಿಯಲ್ಲಿ ಗೋಹತ್ಯೆ ನಿಷೇಧ ಮತ್ತು ಲವ್ ಜಿಹಾದ್ ವಿರುದ್ಧ ಕಾನೂನು ರೂಪಿಸುವ ಕುರಿತು ಚರ್ಚೆ ನಡೆದಿತ್ತು. ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಗೋಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ್ದಾರೆ. ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ಕಾನೂನನ್ನು ಕೂಡ ಜಾರಿಗೆ ತರಲಿದ್ದೇವೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.


Spread the love

About Laxminews 24x7

Check Also

ಡ್ಯೂಟಿಯಲ್ಲಿರುವಾಗಲೇ ಹೃದಯಾಘಾತ – ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು

Spread the loveರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್ ಕರ್ತವ್ಯದ ವೇಳೆಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದೇವದುರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ