Breaking News

ಸಿಲಿಕಾನ್ ಸಿಟಿ ಜನರಿಗೆ ಭರ್ಜರಿ ಸಿಹಿಸುದ್ದಿ ವಿಮಾನ ನಿಲ್ದಾಣಕ್ಕೆ ಹೋಗಲು ಇನ್ಮುಂದೆ ಕೇವಲ 10-15 ರೂ. ನೀಡಿ ಪ್ರಯಾಣಿಸಬಹುದು.

Spread the love

ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಮೆಜೆಸ್ಟಿಕ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಲು ಇನ್ಮುಂದೆ ಕೇವಲ 10-15 ರೂ. ನೀಡಿ ಪ್ರಯಾಣಿಸಬಹುದು.

ಇಂದಿನಿಂದ ಮೆಜೆಸ್ಟಿಕ್ ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಶೇಷ ರೈಲು ಸೇವೆ ಲಭ್ಯವಾಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯಿರುವ ದೇವನಹಳ್ಳಿ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿ ಮಾಡಲಾಗಿರುವ ಜೊತೆಗೆ ನಗರದಿಂದ ನಿಲ್ದಾಣಕ್ಕೆ ಓಡಾಡುವ ರೈಲು ಸಂಖ್ಯೆಯನ್ನು ಹೆಚ್ಚಿಸಲಾಗಿದೆ.ಪ್ರಯಾಣ ದರ ಕೇವಲ 10-15 ರೂ.ಇದೆ.

ಕ್ರಾಂತಿವೀರ ಸಂಗೂಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮೊದಲ ರೈಲು ಮುಂಜಾನೆ 4.45 ಕ್ಕೆ ಸಂಚಾರ ಆರಂಭಿಸಲಿದೆ. ರಾತ್ರಿ 9 ಗಂಟೆಗೆ ಕೊನೆಯ ರೈಲು ಹೊರಡಲಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ