Breaking News

ಚುನಾವಣೆ ಸೋತವರಿಂದ ಗೆದ್ದವರ ಮೇಲೆ ಹಲ್ಲೆ , ನಿವೃತ್ತ ಶಿಕ್ಷಕ ಸಾವು

Spread the love

ದಾವಣಗೆರೆ : ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಸೋಲು ಗೆಲುವಿನ ಸಂಬಂಧ ನಡೆದ ಮಾರಾಮಾರಿಯಲ್ಲಿ ನಿವೃತ್ತ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮೀನಿಗರಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಮೀನಿಗರಹಳ್ಳಿ ಗ್ರಾಮದ ನಿವೃತ್ತ ಶಿಕ್ಷಕ ಕೃಷ್ಣಪ್ಪ (70) ಮೃತಪಟ್ಟಿದ್ದು, ಮೃತರ ಮಗ ವಿರೇಂದ್ರ ಎಂಬುವರಿಗೆ ತೀವ್ರ ಗಾಯಗೊಂಡ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ತಿಪ್ಪಮ್ಮ ರಂಗಪ್ಪ ಎಂಬುವರು ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ಶಶಿಕಲಾ ಶೃಂಗೇಶ್ ಎಂಬುವರು ಪರಾಜಿತರಾಗಿದ್ದರು. ಈ ಸಂಬಂಧ ಭಾನುವಾರ ಸಂಜೆ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಜಗಳ ನಡೆಯುತ್ತಿತ್ತು. ಈ ವೇಳೆ ಕೃಷ್ಣಪ್ಪನವರು ಜಗಳ ಬಿಡಿಸಲು ಹೋಗಿದ್ದರು. ಈ ವೇಳೆ ಅವರನ್ನು ಥಳಿಸಿದ ಹಿನ್ನೆಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ