Breaking News

ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

Spread the love

ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ನಿವಾಸದಲ್ಲಿ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದಾಗ ಸಚಿವರು ಈ ವಿಚಾರ ತಿಳಿಸಿದರು.

ಗೋಕಾಕ ಮತ್ತು ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ವಿಚಾರವಾಗಿ ಗೋಕಾಕನ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಚಿವ ರಮೇಶ ಜಾರಕಿಹೊಳಿ ಭೇಟಿಯಾಗಿದ್ದಾರೆ.

ಭೇಟಿ ನಂತರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಹೇಳಿಕೆ ನೀಡಿ,ಸಿದ್ಧರಾಮಯ್ಯ ಸಿಎಂ ಆಗಿದ್ದ ವೇಳೆ ಗೋಕಾಕ್- ಚಿಕ್ಕೋಡಿ ಜಿಲ್ಲೆ ರಚನೆ ಬಗ್ಗೆ ನಿರ್ಣಯ ಮಾಡಲಾಗಿತ್ತು.

ಬೈಲಹೊಂಗಲದವರು ನಮಗೂ ಪ್ರತ್ಯೇಕ ಜಿಲ್ಲೆ ಕೊಡಿ ಅಂತ ಹೇಳಿದ್ದರಿಂದ ಈ ವಿಚಾರ ಅಷ್ಟಕ್ಕೆ ನಿಂತಿದೆ. ಹೊಸ ತಾಲೂಕು ರಚನೆ ಮಾಡಿ ಆ ನಂತರ ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡಲು ಹೇಳಿದ್ದೇನೆ.

ಇದೇ ತಾಂತ್ರಿಕ ಕಾರಣದಿಂದ ಗೋಕಾಕ್ ಜಿಲ್ಲೆಯಾಗುವುದು ಬಾಕಿ ಉಳಿದಿದೆ. ಕೋವಿಡ್ ಹಾಗೂ ಆರ್ಥಿಕ ಕಾರಣದಿಂದ ತಾಲೂಕು ರಚನೆ ಬಾಕಿ ಉಳಿದಿದೆ.

ನನಗೆ ಸುಳ್ಳು ಹೇಳುವುದು ನನಗೆ ಬರೋದಿಲ್ಲ. ಬಳ್ಳಾರಿ ಜಿಲ್ಲೆ ವಿಭಜನೆ ಏಕೆ ಆಯ್ತು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ

ಬಜೆಟ್ ಮುಗಿದ ನಂತರ ನಿಯೋಗ ಹೋಗಿ ಸಿಎಂ ಭೇಟಿ ಮಾಡೋಣ.ಐದಾರು ತಿಂಗಳಲ್ಲಿ ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.


Spread the love

About Laxminews 24x7

Check Also

ಇವತ್ತು ನೀರು ಕಡಿಮೆಯಾಗುತ್ತೆ:ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ನದಿತೀರದ ಜನರಲ್ಲಿ ಅಭಯ

Spread the love ಇವತ್ತು ನೀರು ಕಡಿಮೆಯಾಗುತ್ತೆ:ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ನದಿತೀರದ ಜನರಲ್ಲಿ ಅಭಯ ಚಿಕ್ಕೋಡಿ: ಕೃಷ್ಣಾ ಸೇರಿದಂತೆ ದೂಧಗಂಗಾ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ