Breaking News

ಬೆಳಗಾವಿ ಜಿಲ್ಲಾಸ್ಪತ್ರೆಯ ಹೊರಗುತ್ತಿಗೆ ಗ್ರೂಪ್ ಡಿ ಸಿಬ್ಬಂದಿಗಳಿಗೆ ಕೋವಿಡ್ ಭತ್ಯೆ ನೀಡಿ ಎಂದು ಮನವಿ.

Spread the love

 

ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಗ್ರೂಪ್ ಡಿ ಸಿಬ್ಬಂದಿಗಳಿಗೆ ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ತಮ್ಮ ಜೀವದ ಹಂಗನ್ನು ತೊರೆದು ಕೆಲಸ ಮಾಡಿದ ಗ್ರೂಪ್ ಡಿ ಸಿಬ್ಬಂದಿಗಳಿಗೆ ಕೋವಿಡ್ ಭತ್ಯೆ ನೀಡಬೇಕು ಎಂದು ಪ್ರತಿಭಟನೆ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ.

 

ಹೌದೂ ಹಲವಾರು ವರ್ಷಗಳಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಸಮಾನ ಕೆಲಸಕ್ಕೆ ಸಮಾನ್ ವೇತನ ಸಹ ನೀಡುತ್ತಿಲ್ಲ ಹಾಗೆಯೇ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದ ಮಹಾಮಾರಿ ಕೊರೋನಾ ಹಿನ್ನೆಲೆಯಲ್ಲಿ ತಮ್ಮ ಕುಟುಂಬವನ್ನು ಬಿಟ್ಟು ಕೊರೋನಾ ರೋಗಿಗಳ ಜೊತೆಯಾಗಿ ಹಗಲಿರುಳು ದುಡಿದ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಡಿ ಗ್ರೂಪ್ ಸಿಬ್ಬಂದಿಗಳಿಗೆ ಕೋವಿಡ್ ಭತ್ಯೆ ನೀಡಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಹಾಗೆಯೇ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಹೊರಗುತ್ತಿಗೆ ಗ್ರೂಪ್ ಡಿ ಸಿಬ್ಬಂದಿಗಳು 200 ಇದ್ದು ಇವರೆಲ್ಲರೂ ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಲೇ ಬಂದಿದ್ದಾರೆ ಹಾಗೆಯೇ ನಮಗೆಲ್ಲರಿಗೂ ಮಹಾಮಾರಿ ಕೋವಿಡ್ 19 ನಲ್ಲಿ ಕೆಲಸ ನಿರ್ವಹಿಸಿದ ಹೊರಗುತ್ತಿಗೆ ಗ್ರೂಪ್ ಡಿ ಸಿಬ್ಬಂದಿಗಳಿಗೆ ಕೋವಿಡ್ ಪ್ರೋತ್ಸಾಹ ಧನ ನೀಡಬೇಕು ಎಂದು ಮನವಿ ಸಲ್ಲಿಸಿದರು.

 

ಈ ಸಂದರ್ಭದಲ್ಲಿ ಸಮೀರ್,ಗಜಾನಂದ,ರವಿ ತಳವಾರ್, ದಾಮೋದರ, ಸಾವಿತ್ರಿ ಪಾಟೀಲ್, ಕೃಷ್ಣಾ, ಪುಂಡಲೀಕ್ ಪಾಲೇಕರ,ನೆಹ್ರಾಜ್ ಶೇಖ್, ಇನ್ನು ಹಲವಾರು ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ