Breaking News

ಸ್ಯಾಂಡಲ್‍ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ

Spread the love

ಮೈಸೂರು: ಸ್ಯಾಂಡಲ್‍ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು  ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಫ್ಯಾಂಟಮ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಸುದೀಪ್ ಅವರು ಇಂದು ನಿರ್ದೇಶಕ ಅನೂಪ್ ಭಂಡಾರಿ ಜೊತೆ ಆಗಮಿಸಿ ನಾಡದೇವಿಯ ದರ್ಶನ ಪಡೆದರು.

ತಮ್ಮ ನೆಚ್ಚಿನ ನಟ ಬರುತ್ತಿದ್ದಂತೆಯೇ ಅಭಿಮಾನಿಗಳು ಸುದೀಪ್ ಜೊತೆ ಫೋಟೋ ತೆಗೆದುಕೊಳ್ಳಲು ಮುಗಿಬಿದ್ದರು. ಅಭಿಮಾನಿಗಳ ನೂಕುನುಗ್ಗಲು ಗಮನಿಸಿದ ನಟ, ಓರ್ವನಿಗೆ ಸಂಯಮದಿಂದ ವರ್ತಿಸುವಂತೆ ಕಿವಿಮಾತು ಹೇಳಿದರು.
ದೇವಸ್ಥಾನದಲ್ಲಿ ನಿಶ್ಯಬ್ದ ಕಾಪಾಡುವಂತೆ ಬಾಯಿ ಮೇಲೆ ಬೆರಳು ಇಟ್ಟು ಸುದೀಪ್ ತಮ್ಮ ಅಭಿಮಾನಿಗಳಿಗೆ ಸನ್ನೆ ಮಾಡಿದರು. ಇದೇ ವೇಳೆ ಮಾಸ್ಕ್ ಧರಿಸದೇ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಮತ್ತೊಬ್ಬ ಅಭಿಮಾನಿ ಕ್ಲಾಸ್ ತೆಗೆದುಕೊಂಡ ಪ್ರಸಂಗವೂ ನಡೆಯಿತು.

ಕೊರೊನಾದಿಂದ ಸ್ಥಗಿತವಾಗಿದ್ದ ಸುದೀಪ್ ಅಭಿನಯದ ಫ್ಯಾಂಟಮ್ ಚಿತ್ರದ ಸೂಟಿಂಗ್ ಅನ್ ಲಾಕ್ ಬಳಿಕ ಆರಂಭಗೊಂಡಿತ್ತು. ಕೊರೊನಾ ಆತಂಕದ ನಡುವೆಯೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿದ ಚಿತ್ರತಂಡ ಶೂಟಿಂಗ್ ಮುಗಿಸಿದೆ. ಸುದಫ್ ಮತ್ತು ನಟಿ ಅಪರ್ಣಾ ಬಲ್ಲಾಳ್ ಹುಟ್ಟುಹಬ್ಬದಂದು ಚಿತ್ರದಲ್ಲಿನ ಇಬ್ಬರ ಲುಕ್ ರಿವೀಲ್ ಮಾಡಲಾಗಿತ್ತು. ಹಾಗೆಯೇ ದಟ್ಟ ಕಾಡಿನ ನಡುವೆ ಸುದೀಪ್ ದೋಣಿಯಲ್ಲಿ ಹೊರಟ ಧಗಧಗಿಸುವ ನೋಟ ಸ್ಯಾಂಡಲ್‍ವುಡ್ ಅಂಗಳದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು.


Spread the love

About Laxminews 24x7

Check Also

ವೋಟ್‌ಚೋರಿಗೆ SIR ದುರ್ಬಳಕೆ..? – ಬೆಂಗಳೂರಿನ ಜನರಿಗೂ ಸಿಎಂ ಡಿಕೆಶಿ ಎಚ್ಚರಿಕೆ

Spread the loveಬೆಂಗಳೂರು: ರಾಜ್ಯದಲ್ಲಿ ಎಸ್‌ಐಆರ್ ಫಾರಂ-7 ವಿವಾದ ಮತ್ತೊಂದು ಮಜಲಿಗೆ ತಲುಪಿದೆ. ಬೆಂಗಳೂರಿನಲ್ಲೂ ಎಸ್‌ಐಆರ್ ಸಂಬಂಧ ಇಬ್ಬರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ