Breaking News

ಜ್ಮಾ ಎಂ.ಪೀರಜಾದೆ ಅವರಿಗೆ 2019-20ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ…

Spread the love

ಬೆಳಗಾವಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿ ಪ್ರಸ್ತುತ ಧಾರವಾಡದಲ್ಲಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ಉಪ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ನಜ್ಮಾ ಎಂ.ಪೀರಜಾದೆ ಅವರಿಗೆ 2019-20ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ದೊರಕಿದೆ.
ಈ ಮುಂಚೆ ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಜ್ಮಾ ಪೀರಜಾದೆ, ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಲಂಬಾಣಿ ತಾಂಡಾ ಹಾಗೂ ಗೊಲ್ಲರಹಟ್ಟಿ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ, ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಅದೇ ರೀತಿ ಇಲಾಖೆಯಿಂದ ಹಮ್ಮಿಕೊಳ್ಳಲಾದ ವಿವಿಧ ಜನಪರ ಯೋಜನೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡು ಗ್ರಾಮೀಣ ಜನರ ಹಾಗೂ ವಿಶೇಷವಾಗಿ ರೈತ ಸಮುದಾಯದ ಮೆಚ್ಚುಗೆಗೆ ಪಾತ್ರರಾಗಿದ್ದರು.
ಇವರ ಸೇವೆಯನ್ನು ಪರಿಗಣಿಸಿ ರಾಜ್ಯಮಟ್ಟದ ಸೇವಾ ಸರ್ವೋತ್ತಮ ಪ್ರಶಸ್ತಿ ನೀಡುವಂತೆ ಭೂಮಾಪನ ಇಲಾಖೆಯ ಆಯುಕ್ತರು ಸರಕಾರಕ್ಕೆ ಶಿಫಾರಸ್ಸು ಮಾಡಿದ್ದರು.
ಪೀರಜಾದೆ ಅವರ ಅತ್ಯುನ್ನತ ಸೇವೆಯನ್ನು ಪರಿಗಣಿಸಿ ಸೇವಾ ಸರ್ವೋತ್ತಮ ಪ್ರಶಸ್ತಿಯನ್ನು ಸರಕಾರ ನೀಡಿದೆ. ಪ್ರಶಸ್ತಿಯು 25 ಸಾವಿರ ರೂ. ಪ್ರೋತ್ಸಾಹ ಧನ ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿರುತ್ತದೆ.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ